ಗಂಡು ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತ ಮಹಿಳೆ: ತಾಯಿ ಮಗು ಕ್ಷೇಮ

ಬೆಂಗಳೂರು, ಜೂ 21,ಮೈಸೂರಿನಲ್ಲಿ ಕೊರೋನಾ ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.ಆರೋಗ್ಯ ಇಲಾಖೆ ಟ್ವಿಟ್ಟರ್ ನಲ್ಲಿ ಫೋಟೋ ಒಂದನ್ನು ಶೇರ್ ಮಾಡಿದೆ. ಆರೋಗ್ಯ ಇಲಾಖೆಯ ವೈದ್ಯರು ಸಿ ಸೆಕ್ಷನ್ ಮೂಲಕ ಮಹಿಳೆಗೆ ಹೆರಿಗೆ ಮಾಡಿಸಿದ್ದು, ತಾಯಿ ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದೆ.ಮೈಸೂರು ಡಿಹೆಚ್ಓ ವೆಂಕಟೇಶ್ ಈ ಕುರಿತು ಪ್ರತಿಕ್ರಿಯಿಸಿ, ಮಂಡ್ಯ ಮೂಲದ ಕೆ.ಆರ್ ಪೇಟೆಯಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಯಲ್ಲಿ ಕೊರೊನಾ ಸೋಂಕಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞರು ಹಾಗೂ ಸ್ತ್ರಿರೋಗ ತಜ್ಞರು ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲೇ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಿದ್ದರು ಎಂದು ತಿಳಿಸಿದರು.ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಹುಟ್ಟಿದ  ಮಗುವಿನ ತೂಕ 2.7 ಕೆ.ಜಿ ಇದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.