ಅಮೆರಿಕದಲ್ಲಿ 10 ಲಕ್ಷ ಜನರಿಗೆ ಕರೋನ ಸೋಂಕು ಪರೀಕ್ಷೆ : ಟ್ರಂಪ್
ವಾಷಿಂಗ್ಟನ್, ಮಾರ್ಚ್ 31, ಅಮೆರಿಕದಲ್ಲಿ 10 ಲಕ್ಷ ಜನರಿಗೆ ಕರೋನ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಹೇಳಿದ್ದಾರೆ.ಇಂದು ನಾವು ಕರೋನ ಹಾವಳಿ ವಿರುದ್ಧದ ಯುದ್ಧದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ್ದೇವೆ. 1 ಮಿಲಿಯನ್ ಅಮೆರಿಕನ್ನರನ್ನು ಪರೀಕ್ಷಿಸಲಾಗಿದೆ ಎಂದು ಟ್ರಂಪ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆಡಳಿತವು ಈಗ ದಿನಕ್ಕೆ 1,00,000 ಮಾದರಿಗಳನ್ನು ಪರೀಕ್ಷಿಸುತ್ತಿದೆ ಎಂದು ಆರೋಗ್ಯ ಮತ್ತು ಮಾನವ ಸೇವೆಗಳ ಕಾರ್ಯದರ್ಶಿ ಅಲೆಕ್ಸ್ ಅಜರ್ ಹೇಳಿದ್ದಾರೆ.ಈ ನಡುವೆ ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್ಡಿಎ) ಸೋಂಕುನಿವಾರಕಗೊಳಿಸುವ ಎನ್ 95 ಮಾಸ್ಕ್ ಗಳನ್ನು ಅನುಮೋದಿಸಿದ್ದು ಆರೋಗ್ಯ ಕಾರ್ಯಕರ್ತರು ಅವುಗಳನ್ನು ಮರುಬಳಕೆ ಮಾಡಬಹುದು ಎಂದು ಟ್ರಂಪ್ ಹೇಳಿದ್ದಾರೆ.ದೇಶದಲ್ಲಿ ಕರೋನ ಸೋಂಕಿಗೆ ಬಲಿಯಾದವರ ಸಂಖ್ಯೆಈಗ 3,000 ದಾಟಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ಇತ್ತೀಚಿನ ಮಾಹಿತಿ ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 