ತೆಲಂಗಾಣದಲ್ಲಿ ಏಪ್ರಿಲ್ 15ರವರೆಗೆ ಕೊರೋನಾ ಲಾಕ್‌ಡೌನ್ ವಿಸ್ತರಣೆ

ಹೈದರಾಬಾದ್, ಮಾ.27, ರಾಜ್ಯದಲ್ಲಿ  ಕೊರೋನಾ ವೈರಸ್‌ ಸೋಂಕು ಹರಡುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ, ಈಗಾಗಲೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಏಪ್ರಿಲ್ 15ರವರೆಗೆ ವಿಸ್ತರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ.ಕೋವಿಡ್ 19 ಅನ್ನು ನಿಯಂತ್ರಿಸಲು ಸಲುವಾಗಿ ಲಾಕ್ ಡೌನ್ ಮಾರ್ಚ್ 31 ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಭಾನುವಾರ ಮುಖ್ಯಮಂತ್ರಿ  ಚಂದ್ರಶೇಖರ್ ರಾವ್ ಘೋಷಿಸಿದ್ದರು.ವೈರಸ್ ಹರಡುವುದನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ವಿವಿಧ ಇಲಾಖೆ ಮುಖ್ಯಸ್ಥರೊಂದಿಗೆ  ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರಗಳನ್ನು  ಪ್ರಕಟಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶುಕ್ರವಾರ ಮತ್ತೆ ಹತ್ತು ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 59 ಕ್ಕೆ ಏರಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕೋವಿಡ್ -19 ಕಾರಣದಿಂದ ವೈದ್ಯಕೀಯ ಸೇವೆಯಲ್ಲಿ ಒತ್ತಡ ಉಂಟಾದರೆ ಸರ್ಕಾರವು ನಿವೃತ್ತ ವೈದ್ಯರು, ದಾದಿಯರನ್ನು ತೊಡಗಿಸಿಕೊಳ್ಳಲಿದೆ ಎಂದು ಅವರು ಹೇಳಿದರು.
ಲಾಕ್‌ಡೌನ್ ಅನ್ನು  ಬೆಂಬಲಿಸಿದ್ದಕ್ಕಾಗಿ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದ ಅವರು, ವೈರಸ್ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.ಸರ್ಕಾರ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿದ್ದರೆ ರಾಜ್ಯಕ್ಕೆ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾವ್ ಹೇಳಿದರು.