ಕೊರೊನಾ ಭೀತಿ: ಫ್ರೇಜರ್ ಟೌನ್ ಪೊಲೀಸ್ ಠಾಣೆಗೆ ಸಾರ್ವಜನಿಕರ ನಿರ್ಬಂಧ

ಬೆಂಗಳೂರು, ಮೇ 24,ಮಹಾಮಾರಿ ಕೊರೊನಾ ವೈರಸ್ ಸೋಂಕು ಕೊರೊನಾ ವಿರುದ್ಧ ಹೋರಾಡುತ್ತಿರುವರಿವೂ ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.ಇತ್ತೀಚೆಗೆ  ನಗರದ ಫ್ರೇಜರ್ ಟೌನ್ ಸಂಚಾರಿ ಪೊಲೀಸ್ ಪೇದೆಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಠಾಣೆಯಲ್ಲಿದ್ದ 68 ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಅಲ್ಲದೇ, ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಫ್ರೇಜರ್ ಟೌನ್ ಪೊಲೀಸ್ ಠಾಣೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಕೇವಲ ಇಬ್ಬರೂ ಸಿಬ್ಬಂದಿಯನ್ನು ಮಾತ್ರ ನಿಯೋಜಿಸಲಾಗಿದೆ.ಫ್ರೇಜರ್ ಟೌನ್ ಪೊಲೀಸ್ ಠಾಣೆಯ 45 ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಹಾಗೂ 23 ಸಿಬ್ಬಂದಿಗೆ ಹೋಟೆಲ್  ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.