ಬೆಂಗಳೂರು ಏ 4,ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದೂ ಸಹ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರು ಹಾಗೂ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 128 ಸೋಂಕು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಇಂದು ಮುಖ್ಯಮಂತ್ರಿಗಳು ಸಚಿವರು ಶಾಸಕರ ಸಭೆ ನಡೆಸಲಿದ್ದಾರೆ.ಇನ್ನು ನಿನ್ನೆ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಮುಸ್ಲಿಂ ಸಮುದಾಯದ ಮುಖಂಡರು, ಅಧಿಕಾರಿಗಳು ಹಾಗೂ ಬೆಂಗಳೂರು ನಗರ ಸಚಿವರ ಜೊತೆ ಸಭೆ ಮಾಡಿ ಕೆಲವು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿತ್ತು.