ಬೆಂಗಳೂರು, ಏ 21,ಕೊರೊನಾ ಭೀತಿಯ ಸಂದರ್ಭದಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಕೊರೊನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಬಿಕ್ಕಟ್ಟಿನ ಸವಾಲಿನ ಸನ್ನಿವೇಶಗಳಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರು, ದೃಶ್ಯ ಮಾಧ್ಯಮ ಪ್ರತಿನಿಧಿಗಳು ಸೋಂಕಿನಿಂದ ಬಾಧಿತರಾಗದಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವವರು ಸೋಂಕು ತಗುಲದಂತೆ ಎಚ್ಚರಿಕೆ ವಹಿಸಿದ್ದರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಹೇಳಿದ್ದಾರೆ.ಇದಕ್ಕೂ ಮುನ್ನ ಅವರು, 55 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರೆಲ್ಲರಿಗೂ ಕೊರೊನಾ ಸೋಂಕು ಪರೀಕ್ಷೆ ಕಡ್ಡಾಯ ಎಂದು ಹೇಳಿದ್ದರು.