ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೂ ಕಾಲಿಟ್ಟ ಕೊರೊನಾ
ಲೋಕದರ್ಶನವರದಿ
ಬಳ್ಳಾರಿ೧೩: ನೆರೆಯ ಆಂಧ್ರಪ್ರದೇಶ ಹಾಗೂ ಹೈ-ಕ ಭಾಗದ ತ್ರಿವಳಿ ಜಿಲ್ಲೆಗಳ ಜನರ ಆರೋಗ್ಯ ಸಂಜೀವಿನಿಯಾಗಿದ್ದ ವಿಮ್ಸ್ ಆಸ್ಪತ್ರೆಗೂ ಕೊರೊನಾ ಸೋಂಕು ವ್ಯಾಪಿಸಿದ್ದು, ಇದೀಗ ಆಸ್ಪತ್ರೆಯಲ್ಲಿನ ರೋಗಿಗಳು ಭಯಭೀತರಾಗಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಸಿರಗುಪ್ಪ ತಾಲೂಕಿನ ಗೋಸಬಾಳ ಗ್ರಾಮದ 18 ವರ್ಷದ ಯುವತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಳು. ಇದೀಗ ಆಕೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅತೀವ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮುಂಜಾಗ್ರತಾಕ್ರಮವಾಗಿ ಕೋವಿಡ್-19 ಪರೀಕ್ಷೆಗೆ ಜಿಲ್ಲಾಡಳಿತ ಒಳಪಡಿಸಿತ್ತು. ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ನಿನ್ನೆ ಆಕೆಯನ್ನು ಐಸೋಲೇಷನ್ ವಾಡ್ಗರ್ೆ ಶಿಫ್ಟ್ ಮಾಡಿರುವುದಾಗಿ ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ತಿಳಿಸಿದ್ದಾರೆ.
ಇದೀಗ ಯುವತಿಗೆ ಚಿಕಿತ್ಸೆ ನೀಡಿದ ವಿಮ್ಸ್ ವೈದ್ಯರು ಹಾಗೂ ಆಕೆಯನ್ನು ವಾಡ್ಗರ್ೆ ಶಿಫ್ಟ್ ಮಾಡಿದ ವಿಮ್ಸ್ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಯುವತಿ ವಿಮ್ಸ್ನಲ್ಲಿ ಓಡಾಡಿದ ಹಿನ್ನೆಲೆಯಲ್ಲಿ ಸಿಸಿಟಿವಿ ಪರಿಶೀಲನೆ ನಡೆಸುತ್ತಿರುವ ವಿಮ್ಸ್ ಆಡಳಿತ ಮಂಡಳಿ, ಆಸ್ಪತ್ರೆಯ 25ಕ್ಕೂ ಅಧಿಕ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೂ 17 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಈಗಾಗಲೇ 11 ಮಂದಿ ಗುಣಮುಖರಾಗಿದ್ದಾರೆ.
ಗಡಿಭಾಗಕ್ಕೆ ಹೋಗಿದ್ದ ಯುವತಿ: ನೆರೆಯ ಆಂಧ್ರಪ್ರದೇಶ ಭಾಗದ ಹೊಳಲಗುಂದಿ ಗ್ರಾಮದಲ್ಲಿ ನೆಲೆಸಿರುವ ತಮ್ಮ ಅಣ್ಣನ ಮನೆಗೆ ಈ ಯುವತಿ ಹೋಗಿದ್ದಳು ಎಂಬ ಮಾಹಿತಿಯೂ ಲಭ್ಯವಾಗಿದ್ದು, ಜಿಲ್ಲಾಡಳಿತ ಇದೀಗ ಹುಡಗಿಯ ಟ್ರಾವೆಲ್ ಹಿಸ್ಟರಿ ಹುಡುಕಾಟದಲ್ಲಿ ತೊಡಗಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 