ದಕ್ಷಿಣ ಕನ್ನಡ : 10ತಿಂಗಳ ಮಗುವಿಗೆ ಕೊರೋನಾ ಸೋಂಕು

ಮಂಗಳೂರು , ಮಾ.28 : ರಾಜ್ಯದಲ್ಲಿ ಹತ್ತು ತಿಂಗಳ ಹಸುಗೂಸಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪ ನಡು ಗ್ರಾಮದ ಹಸುಗೂಸು ಕೋರೊನಾ ಸೋಂಕಿನಿಂದ ಬಳಲುತ್ತಿದೆ.ಜ್ವರ ಹಾಗೂ ಶೀತದಿಂದ ಬಳಲುತ್ತಿದ್ದ ಈ ಮಗುವನ್ನು 23 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಗಂಟಲಿನ ದ್ರವ ಪರೀಕ್ಷೆ ವರದಿ ಬಂದಿದ್ದು ಮಗುವಿಗೆ ಕೋರೊನಾ ಸೋಂಕು ಇರುವುದು ದೃಢಪಟ್ಟಿದೆ.ಇದೀಗ ಮಗುವಿನ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾವಣೆಯಲ್ಲಿ ಇರಿಸಲಾಗಿದೆ. ಈ ಕೂಸಿಗೆ ಯಾವ ಮೂಲದಿಂದ ಸೋಂಕು ತಗಲಿರಬಹುದೆಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸಜಿಪನಡು ಗ್ರಾಮಕ್ಕೆ ಹೊರಗಿನವರು ಯಾರು ಪ್ರವೇಶಿಸದಂತೆ ಹಾಗೂ ಗ್ರಾಮಸ್ಥರು ಹೊರ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ.