ನವದೆಹಲಿ, ಮೇ, 19, ದೇಶದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 5,242 ಮಂದಿಗೆ ಸೋಂಕು ತಗುಲಿದ್ದು, ಪರಿಣಾಮ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ಸೋಮವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ 5,242 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 2,347 ಮಂದಿಗೆ ಸೋಂಕು ತಗುಲಿದೆ. ಒಂದೇ ದಿನ 157 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3 ಸಾವಿರ ದಾಟಿದೆ.ಇನ್ನು 1 ಲಕ್ಷ ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತ 11 ನೇ ಸ್ಥಾನದಲ್ಲಿದೆ. ಅಮೆರಿಕ, ರಷ್ಯಾ, ಸ್ಪೇನ್, ಇಂಗ್ಲೆಂಡ್, ಬ್ರೆಜಿಲ್, ಇಟಲಿ, ಜರ್ಮನಿ, ಟರ್ಕಿ, ಫ್ರಾನ್ಸ್, ಇರಾನ್ ಬಳಿಕ ಭಾರತ 11 ನೇ ಸ್ಥಾನದಲ್ಲಿದೆ.