ಟೋಕ್ಯೋ, ಫೆ 12 : ಜಪಾನಿನ ಡೈಮಂಡ್ ಪ್ರಿನ್ಸಸ್ ಹಡಗಿನಲ್ಲಿರುವವರ ಪೈಕಿ ಇತರ 39 ಜನರಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಖಚಿತಪಟ್ಟಿದೆ ಎಂದು ಜಪಾನಿನ ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.
ಎಲ್ಲರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು 39 ಜನರಲ್ಲಿ ಸೋಂಕು ಖಚಿತಪಟ್ಟಿದ್ದು ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಈವರೆಗೆ 174 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಹೇಳಿಕೆ ತಿಳಿಸಿದೆ.