ನವದೆಹಲಿ,ಮಾ 29, ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು 975 ದಾಟಿದೆ , ಈವರೆಗೆ ಮಾರಕ ಸೋಂಕಿಗೆ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ ದೇಶದಲ್ಲಿ ಶನಿವಾರ ಒಂದೇ ದಿನದಲ್ಲಿ 194 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್, ದೆಹಲಿ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಕೇರಳ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಕರೊನ ಸೋಂಕಿನಿಂದ ಸಾವುಗಳು ಸಂಭವಿಸಿದೆ.ಆದರೆ ಕೇಂದ್ರ ಆರೋಗ್ಯ ಸಚಿವಾಲಯ ಮಾತ್ರ ಕರೋನ ದಿಂದ ಈವರೆಗೆ ದೇಶದಲ್ಲಿ 19 ಜನರ ಮಾತ್ರ ಮೃತಪಟ್ಟಿದ್ದಾರೆ ಎಂದು ಹೇಳಿದೆ .ಈವರೆಗೆ ಬಹುತೇಕ ಪ್ರಕರಣಗಳಲ್ಲಿ ವಿದೇಶದಿಂದ ಆಗಮಿಸಿದವರು ಹಾಗೂ ಅವರ ಜೊತೆ ಸಂಪರ್ಕಕ್ಕೆ ಬಂದವರಿಗೆ ಸೋಂಕು ತಗಲಿರುವುದು ವರದಿಯಾಗಿತ್ತು. ಆದರೆ ಸಮುದಾಯದೊಳಗೆ ಸೋಂಕು ಹರಡುವುದನ್ನು ಮೂರನೆ ಹಂತವೆಂದು ಪರಿಗಣಿಸಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.