ಕೊರೊನಾ ವೈರಸ್ : ಚೀನಾದ ಹುಬೈ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ 699 ಕ್ಕೆ ಏರಿಕೆ

ಮಾಸ್ಕೋ, ಫೆ 8, ಚೀನಾದ ಹುಬೈ ಪ್ರಾಂತ್ಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 699 ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಪ್ರಾಂತೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.ಸೋಂಕಿತರ ಸಂಖ್ಯೆ ಕಳೆದ 24 ಗಂಟೆಗಳಲ್ಲಿ 24,953 ರಿಂದ 22,112 ಕ್ಕೆ ಏರಿಕೆಯಾಗಿದೆ. 1,100 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ.  ಕೊರೊನಾ ವೈರಾಣು ಸೋಂಕು ಡಿಸೆಂಬರ್‌ ಅಂತ್ಯದ ವೇಳೆಗೆ ಚೀನಾದ ಹುಬೈ ಪ್ರಾಂತ್ಯದಲ್ಲಿನ ವುಹಾನ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಯಿತು. ಈಗ  25 ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕಳೆದ ವಾರ ಜಾಗತಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿತು.