ಕೋರೋನಾ ವೈರಸ್: ಆತಂಕ ಬೇಡ, ಜಾಗ್ರತೆ ಇರಲಿ : ಸಚಿವ ಕೋಟ
ಮಂಗಳೂರು, ಫೆ 5 : ಚೀನಾದಲ್ಲಿ ಹರಡಿರುವ ಮಾರಕ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿ ಲ್ಲ. ಆದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳದಲ್ಲಿ ಮಾರಣಾಂತಕ ಕೊರೋನಾ ವೈರಾಣು ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಯಾವುದೇ ಸಂಶಯ,ಮಾಹಿತಿ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದ್ದು, ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಜಿಲ್ಲೆಗೆ ಪ್ರಮುಖ ಪ್ರವೇಶ ಸ್ಥಳವಾಗಿರುವ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಇಲ್ಲದೇ ಇರುವುದರಿಂದ ಕೊರೋನಾ ವೈರಸ್ ಹರಡುವ ಬಗ್ಗೆ ಆತಂಕವಿಲ್ಲ. ಆದಾಗ್ಯೂ ವಿಶೇಷವಾಗಿ ಕೆಲ ದಿನಗಳ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡುಬಂದಿರುವುದಿಲ್ಲ ಎಂದು ಅವರು ಹೇಳಿದರು.
ಫೆ. 4 ರಂದ ನವ ಮಂಗಳೂರು ಬಂದರಿಗೆ ವಿದೇಶಿ ಪ್ರವಾಸಿಗರ ಹಡಗು ಬಂದಿದ್ದು, ಇದರಲ್ಲಿ ಬಂದಿದ್ದ ಚೀನಾ ದೇಶದ ಮೂವರು ನಾಗರೀಕರಿಗೆ ಹಡಗಿನಿಂದ ಹೊರಗೆ ಬರಲು ಅವಕಾಶ ನೀಡಿಲ್ಲ ಎಂದು ಸಭೆಗೆ ಎನ್.ಎಂ.ಪಿ.ಟಿ. ಅಧಿಕಾರಿಗಳು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಚಿಕಿತ್ಸೆಗಾಗಿ 10 ವಿಶೇಷ ಹಾಸಿಗೆಯನ್ನು ಸಿದ್ಧತೆಯಲ್ಲಿಡಲಾಗಿದೆ. ದಿನದ 24 ಗಂಟೆಯೂ ಇದರ ನಿರ್ವಹಣೆಗಾಗಿ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯ ಡಾ. ಸತೀಶ್ಚಂದ್ರ ಮಾತನಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದಿಕೊಳ್ಳುವುದು ಈ ರೋಗ ನಿಯಂತ್ರಣದಲ್ಲಿ ಪಮುಖ್ಯವಾಗಿದೆ ಎಂದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 