ಕೊರೋನಾ ವೈರಸ್, ಡಿಸೆಂಬರ್ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಾ. ಅಶ್ವತ್ಥನಾರಾಯಣ
ಬೆಂಗಳೂರು, ಏ 8, ಕೊವಿಡ್ 19 ವೈರಸ್ ಸಂಪೂರ್ಣ ನಿರ್ಣಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಬುಧವಾರ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು, ಅಡುಗೆ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
"ಪ್ರಸ್ತುತ ಸಭೆ, ಸಮಾರಂಭಗಳನ್ನು ಆಯೋಜಿಸದೆ ನಾಗರಿಕರೂ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಆದರೆ, ವೈರಸ್ ಸಂಪೂರ್ಣವಾಗಿ ನಿರ್ಮೂಲನೆ ಆಗುವವರೆಗೂ ಅಂದರೆ ಮುಂದಿನ 7-8 ತಿಂಗಳು ಇದೇ ರೀತಿ ಸಹಕಾರ ಮುಂದುವರಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡುವ ಜತೆಗೆ ಮಾಸ್ಕ್ಗಳನ್ನು ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು"ಎಂದರು.
"ಸೋಂಕಿನ ಪ್ರಮಾಣ, ಸ್ಥಿತಿಗತಿ ಹಾಗೂ ವ್ಯವಸ್ಥೆಯ ಸದೃಢತೆಯನ್ನು ಪರಿಶಿಲೀಸಿದ ನಂತರ ಲಾಕ್ಡೌನ್ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಂದು ನಿರ್ಧಾರಕ್ಕೆ ಬರಬಹುದು. ಸಮಾಜದ ಹಿತ ಕಾಯುವ ಉದ್ದೇಶದಿಂದ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಸಾರ್ವಜನಿಕರು ತಪ್ಪದೇ ಪಾಲಿಸಬೇಕು,"ಎಂದು ಮನವಿ ಮಾಡಿದರು.
"ಮಲ್ಲೇಶ್ವರ ಭಾಗದಲ್ಲಿ ನಿತ್ಯ 12 ಸಾವಿರ ಆಹಾರ ಪೊಟ್ಟಣಗಳನ್ನು ಅಗತ್ಯ ಇರುವವರಿಗೆ ವಿತರಿಸುವ ಕೆಲಸ ಮಾಡಲಾಗುತ್ತಿದೆ. ಆಹಾರ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಗುಣಮಟ್ಟದ ಪರಿಶೀಲನೆ ನಡೆಸಿದ್ದೇನೆ. ಕೂಲಿ ಕಾರ್ಮಿಕರು, ಅಸಹಾಯಕರು, ಹಿರಿಯ ನಾಗರಿಕರ ಮನೆಗೆ ತೆರಳಿ, ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಔಷಧ, ಆಹಾರ ಹಾಗೂ ಇನ್ನಿತರ ಸೌಕರ್ಯಕ್ಕಾಗಿ ಮಲ್ಲೇಶ್ವರ ಕ್ಷೇತ್ರದ ಎಲ್ಲ ವಾರ್ಡ್ಗಳ ನಾಗರಿಕರಿಗೆ 3 ಮೊಬೈಲ್ ನಂಬರ್ ಕೊಟ್ಟಿದ್ದೇವೆ. ಜತೆಗೆ, ಎಲ್ಲ ರಸ್ತೆಗಳಲ್ಲಿ ಸೋಂಕು ನಿವಾರಕ ಔಷಧ ಸಿಂಪಡಿಸಲಾಗುತ್ತಿದೆ,"ಎಂದು ಮಾಹಿತಿ ನೀಡಿದರು. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ. 2 ಕೆಜಿ ಗೋಧಿ, 1 ಕೆಜಿ ಬೇಳೆ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಬರುವ ಪಡಿತರವನ್ನು 20ನೇ ತಾರೀಕಿನ ನಂತರ ವಿತರಣೆ ಮಾಡಲಾಗುತ್ತದೆ. ಇದಲ್ಲದೇ, ಕಾರ್ಮಿಕ ಇಲಾಖೆಯಿಂದ ಒಂದೂವರೆ ಲಕ್ಷ ಮಂದಿಗೆ ಪಡಿತರ ವಿತರಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ 2 ಲಕ್ಷ ಮಂದಿಗೆ ಪಡಿತರ ವಿತರಿಸಲು ನಿರ್ಧರಿಸಲಾಗಿದೆ. ಜತೆಗೆ ಚುನಾಯಿತ ಪ್ರತಿನಿಧಿಗಳು, ಸಂಘಟನೆಗಳು, ನಾಗರಿಕರು ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಮೂಲಕ ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ,"ಎಂದು ಅಭಿನಂದಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 