ಕೊರೊನಾ ಸೋಂಕಿಗೆ ಗದಗದ 80 ವರ್ಷದ ವೃದ್ಧೆ ಬಲಿ

ಗದಗ, ಏ 9, ಮಾರಣಾಂತಿಕ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ಗದಗ 80 ವರ್ಷದ ವೃದ್ಧೆ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. 166ನೇ ರೋಗಿಯಾಗಿದ್ದ ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆ ದಾಖಲಾಗಿದ್ದರು. ಏ. 7ರಂದು ಇವರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6ಕ್ಕೇರಿಕೆಯಾಗಿದೆ.