ಜಗತ್ತಿನ 72 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು : ವಿಶ್ವ ಆರೋಗ್ಯ ಸಂಸ್ಥೆ

 ಮಾಸ್ಕೋ, ಜೂನ್ 12,ಜಗತ್ತಿನ ವಿವಿಧೆಡೆಗಳ 72,73,958 ಜನರಿಗೆ ಕೊರೊನಾ ವೈರಾಣು ಸೋಂಕು ತಗುಲಿದ್ದು 4,13,000 ಕ್ಕೂ ಹೆಚ್ಚು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ತಿಳಿಸಿದೆ.ಕಳೆದೊಂದು ದಿನದಲ್ಲಿ 1,28,419 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 5,347 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ತಡರಾತ್ರಿ ಬಿಡುಗಡೆ ಮಾಡಿರುವ ಅಂಕಿಅಂಶ ತಿಳಿಸಿದೆ ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಕೋವಿಡ್ – 19 ಅನ್ನು ಸಾಂಕ್ರಾಮಿಕ ಎಂದು ಘೋಷಿಸಿತ್ತು. ಈವರೆಗೆ ಜಗತ್ತಿನಾದ್ಯಂತ 75 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಬಳಲುತ್ತಿದ್ದು ಸುಮಾರು 4.21 ಲಕ್ಷ ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಇತ್ತೀಚಿನ ವರದಿ ತಿಳಿಸಿದೆ.