ಸಂಘಟಿತ ಪ್ರಯತ್ನದಿಂದ ಮಾತ್ರ ಕೊರೋನಾ ವೈರಸ್ ನಿಯಂತ್ರಣ ಸಾಧ್ಯ: ಯಡಿಯೂರಪ್ಪ

ಬೆಂಗಳೂರು, ಏ 25, ಕೊರೋನಾ ವೈರಸ್ ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಸಂಘಟಿತ ಪ್ರಯತ್ನದಿಂದ ಮಾತ್ರ ಸೋಂಕು ನಿಯಂತ್ರಣ ಸಾಧ್ಯ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ವೈಯಕ್ತಿಕ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದಿದ್ದಾರೆ. ಈ ಕುರಿತು ಸಂದೇಶವಿರುವ ವಿಡಿಯೋ ಹಂಚಿಕೊಂಡಿರುವ ಯಡಿಯೂರಪ್ಪ, ಮೇ ೩ ರ ನಂತರ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಮಾರ್ಗದರ್ಶನ ಮಾಡಲಿದ್ದಾರೆ. ಆಗಿನ ಸನ್ನಿವೇಶಕ್ಕೆ ತಕ್ಕಂತೆ ಅಗತ್ಯ ಮಾಹಿತಿ ಆಧಾರದ ಮೇಲೆ ನಿರ್ದೇಶನ ನೀಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಸಂಘಟಿತ ಪ್ರಯತ್ನದಿಂದ ಕೊರೊನಾ ವಿರುದ್ಧ ಹೋರಾಡುವ ಸಂಕಲ್ಪ ಮಾಡಬೇಕು ಎಂದು  ತಿಳಿಸಿದ್ದಾರೆ.