ಮಾಸ್ಕೋ, ಮೇ 24,ವಿಶ್ವಾದ್ಯಂತ ಕೊರೊನಾ ವೈರಾಣು ಸೋಂಕು 54 ಲಕ್ಷಕ್ಕೂ ಹೆಚ್ಚು ಜನರಿಗೆ ತಗುಲಿದೆ ಎಂದು ವರದಿಯಾಗಿದೆ.53,09,698 ಜನರಿಗೆ ಸೋಂಕು ತಗುಲಿದ್ದು 3,42,078 ಜನರು ಮೃತಪಟ್ಟಿದ್ದಾಋಎ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ. 51,03,006 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು 3,33,401 ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ನೀಡಿದ್ದ ವರದಿಯಲ್ಲಿ ತಿಳಿಸಲಾಗಿತ್ತು. ವಿಶ್ವಾದ್ಯಂತ ಉತ್ತರ ಮತ್ತು ದಕ್ಷಿಣ ಅಮೆರಿಕಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಯೂರೋಪ್ ನಲ್ಲಿ 1,73,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.