ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಮಹಿಳೆಯಲ್ಲಿ ಕೊರೋನಾ ಸೋಂಕು
ಮಂಗಳೂರು, ಏ.23, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದ ಮಹಿಳೆಯೋರ್ವರಲ್ಲಿ ಕೊರೋನಾ ವೈರಸ್ ಸೋಂಕು ಇಂದು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಸುಮಾರು 75 ವರ್ಷ ವಯಸ್ಸಿನ ಅವರು ಎ. 22ರಂದು ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಗಂಟಲು ದ್ರವ ಪರೀಕ್ಷೆಯಿಂದ ಕೊರೋನ ಸೋಂಕು ಇರುವುದು ದೃಢಪಟ್ಟಿರುತ್ತದೆ. ಏ. 19ರಂದು ಕೊರೋನ ವೈರಸ್ ಗೆ ಬಲಿಯಾದ ಮಹಿಳೆಯ ಸಂಬಂಧಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.ಇವರು ಕಳೆದ ಮಾರ್ಚ್ 18ರಂದು ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 