ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ
ಬೆಂಗಳೂರು, ಏ.25, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ 33 ವರ್ಷದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೇರಿದ್ದು, ಸೋಂಕಿತ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೋನ ಸೋಂಕಿತರಾಗಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಟ್ವಾಳ ಪೇಟೆಯ 67 ವರ್ಷ ಪ್ರಾಯದ ಮಹಿಳೆಯ ಪುತ್ರಿಯಾಗಿದ್ದಾರೆ. ತಾಯಿಯ ಸಂಪರ್ಕದಿಂದ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಬಂಟ್ವಾಳ ಪೇಟೆಯಲ್ಲಿ ನಾಲ್ವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು ನಾಲ್ವರೂ ಮಹಿಳೆಯರಾಗಿದ್ದಾರೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 18 ಮಂದಿಗೆ ಸೋಂಕು ಪಾಸಿಟಿವ್ ಆಗಿದ್ದು, ಈ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2 ಮಂದಿ ಮೃತಪಟ್ಟಿದ್ದು, 4 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 