ಬೀದರ್‌ನಲ್ಲಿ 11ಮಂದಿಗೆ ಕೊರೊನಾ ಸೋಂಕಿರುವುದು ದೃಢ : ಶ್ರೀರಾಮುಲು
ಬೆಂಗಳೂರು, ಏ.2, ಬೀದರ್ ಜಿಲ್ಲೆಯ 11 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 27 ಮಂದಿ ತಬ್ಲಿಗಿ ಜಮಾತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅವರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸ್ಯಾಂಪಲ್ಸ್ ಕಳಿಸಿಕೊಡಲಾಗಿದೆ. 27 ಜನರಲ್ಲಿ 11 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ಇರುವುದು ಧೃಡಪಟ್ಟಿದೆ ಎಂದರು.ಇನ್ನು ರಾಜ್ಯದ 362 ಮಂದಿ ಸಭೆಯಲ್ಲಿ ಭಾಗಿಯಾಗಿದ್ದು, ರಾಜ್ಯದಲ್ಲಿ ಒಟ್ಟು 121 ಪಾಸಿಟಿವ್ ಕೇಸ್ ದಾಖಲಾಗಿವೆ. ವಿಶೇಷವಾಗಿ ಬೀದರ್ ಪ್ರಕರಣದ ಮೇಲೆ ಅತಿ ಹೆಚ್ಚು ಗಮನ ವಹಿಸಲಾಗುತ್ತಿದೆ. ಈಗಾಗಲೇ ಅಲ್ಲಿ ಸಾಕಷ್ಟು ಮುಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದರು.ಇನ್ನು, ಇಲ್ಲಿಂದ ತೆರಳಿದ್ದ 362 ಮಂದಿಯ ಕಾಲ್ ಟ್ರೇಸ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 