ಕಲಬುರಗಿಯ ಮೃತ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಖಚಿತ

ಕಲಬುರಗಿ, ಏ 21,ಕಲಬುರಗಿ ಜಿಲ್ಲೆಯಲ್ಲಿ ಸೋಮವಾರ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕಲಬುರಗಿಯಲ್ಲಿ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದ 80 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ”ಎಂದಿದ್ದಾರೆ.ಕಳೆದ ಮೂರು ವರ್ಷಗಳಿಂದ ಅವರು ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು ಎಂದೂ ಸಚಿವರು ಟ್ವೀಟ್ ಮಾಡಿದ್ದಾರೆ.