ಬೆಂಗಳೂರು, ಜೂ 11,ನಗರದ ಮೆಯೊಹಾಲ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೂ.11 ಹಾಗೂ 12ರಂದು ಕಲಾಪಗಳನ್ನು ರದ್ದುಗೊಳಿಸಲಾಗಿದೆ.ಇವರು 11ನೇ ಎಸಿಎಂಎಂ ಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 48 ಗಂಟೆಗಳ ಕಾಲ ನ್ಯಾಯಾಲಯವನ್ನು ಸೀಲ್‌ಡೌನ್ ಮಾಡಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ. ಗುರುವಾರ ಮತ್ತು ಶುಕ್ರವಾರ ಕೋರ್ಟ್ ಕಲಾಪ ರದ್ದುಗೊಳಿಸಲಾಗಿದೆ. ಈ ದಿನಗಳಲ್ಲಿ ಅರ್ಜಿ ಸಲ್ಲಿಕೆಗೆ ನೀಡಿದ್ದ ಅವಕಾಶವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.