ಕೊರೊನಾ ರೋಗಿಗಳ ಛಾಯಾಚಿತ್ರ ಸೆರೆಹಿಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ
ಬೆಂಗಳೂರು, ಜೂ.22,ಇನ್ಮುಂದೆ ಅನುಮತಿ ಇಲ್ಲದೆ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಛಾಯಾಚಿತ್ರ ಸೆರೆಹಿಡಿಯುವುದು ಹೆಚ್ಚಾಗುತ್ತಿದ್ದು, ಅದು ಮಾಧ್ಯಮಗಳಲ್ಲೂ ಬಿತ್ತರವಾಗುತ್ತಿದೆ. ಹೀಗಾಗಿ ಈ ಕುರಿತು ಅನೇಕ ಜನ ದೂರು ನೀಡುತ್ತಿದ್ದಾರೆ. ಈ ರೀತಿ ಫೋಟೋ/ವಿಡಿಯೋ ಸೆರೆಹಿಡಿಯುವುದರಿಂದ ನಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ಮುಜುಗರ ಉಂಟಾಗುತ್ತದೆ ಎಂದು ಅವರು ದೂರುತ್ತಿದ್ದಾರೆ.ಹೀಗಾಗಿ ಯಾರೂ ಅನುಮತಿ ಇಲ್ಲದೇ ಕೊರೊನಾ ರೋಗಿಗಳ ಛಾಯಾಚಿತ್ರ ಸೆರೆಹಿಡಿಯುವಂತಿಲ್ಲ. ಈ ನಿಯಮ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 