ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ಒತ್ತಾಯ
Corruption allegations at the Urban Development Authority: Demand for action
ಕೊಪ್ಪಳ, 19: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ವಂಚನೆ ಪ್ರಕರಣದ ಆರೋಪಿಗಳನ್ನು ಬಂಧಿಸಿ, ಪಾರದರ್ಶಕ ತನಿಖೆ ನಡೆಸಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಘಟಕ ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿತು.
ನಗರದ ಬಸವೇಶ್ವರ ವೃತ್ತದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ?8 ಕೋಟಿಗೂ ಅಧಿಕ ಹಣದ ವಂಚನೆ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 94/2026 ಪ್ರಕರಣ ದಾಖಲಾಗಿದೆ. ಆದರೆ, ಪ್ರಕರಣದ ಪ್ರಮುಖ ಆರೋಪಿ ರವೀಂದ್ರಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹೊರಗುತ್ತಿಗೆ ನೌಕರನಾಗಿದ್ದ ರವೀಂದ್ರಕುಮಾರ್, ಸರೋಜಮ್ಮ ಬಡಾವಣೆಯಲ್ಲಿ ನಿವೇಶನ ಕೊಡಿಸುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವ ಆರೋಪವಿದೆ. ಈ ಅವಧಿಯಲ್ಲಿ ಕರ್ತವ್ಯದಲ್ಲಿದ್ದ ಇಲಾಖೆಯ ಸಿಬ್ಬಂದಿ, ಆಯುಕ್ತರು ಹಾಗೂ ಬ್ಯಾಂಕ್ ಸಿಬ್ಬಂದಿಯ ಪಾತ್ರದ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ರವೀಂದ್ರಕುಮಾರ್ ಅವರ ಪತ್ನಿ, ಸಹೋದರ ಹಾಗೂ ಆ ಅವಧಿಯ ಆಯುಕ್ತರ ಖಾತೆಗಳಿಗೆ ಹಣ ಜಮೆಯಾಗಿರುವ ಕುರಿತು ಪರೀಶೀಲನೆ ನಡೆಸಬೇಕು. ವಂಚನೆಗೊಳಗಾದ ಪ್ರತಿಯೊಬ್ಬ ಅರ್ಜಿದಾರರಿಗೂ ನಿವೇಶನ ಅಥವಾ ಹಣವನ್ನು ಮರಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಸಂಘಟನೆಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿಜಯಕುಮಾರ ಕವಲೂರು, ತಾಲೂಕು ಅಧ್ಯಕ್ಷ ಮಹೇಶ್ ಅಲ್ಲಾನಗರ, ಗೌರವಾಧ್ಯಕ್ಷ ಜಿ.ಎಸ್. ಗೋನಾಳ ಸೇರಿದಂತೆ ರಾಜಾ ಹುಸೇನ್, ಶಿವಕುಮಾರ ಏಣಗಿ, ಹನುಮಗೌಡ, ನಾಗರಾಜ ನೀಲಗಿರಿ, ಮಾರುತಿ ಬನ್ನಿಕೊಪ್ಪ, ಪ್ರವೀಣ ಗೌಡ, ಆನಂದ ಮಡಿವಾಳರ, ಶಕೀಲ್ ಅಹ್ಮದ್, ಪತ್ತರಯ್ಯ ಹಿರೇಮಠ, ಶಿವು ನೀಲಗಿರಿ, ಹುಚ್ಚಪ್ಪ ಹಳ್ಳಿಕೇರಿ ಹಾಗೂ ಮಹಿಳಾ ಘಟಕದ ಮುಖಂಡರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 