ನಾಗನೂರು ವೃದ್ದಾಶ್ರಮಕ್ಕೆ ಭೇಟಿ ನೀಡಿದ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
Council member Channaraja Hattiholi visits Naganur old age home
ಬೆಳಗಾವಿ 06: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇತ್ತೀಚಿಗೆ ನಗರದ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯಲ್ಲಿರುವ ನಾಗನೂರ ಶ್ರೀ ಶಿವಬಸವೇಶ್ವರ ಟ್ರಸ್ಟ್ ನ ಶ್ರೀಮತಿ ಚನ್ನಮ್ಮ ಬಸವಂತಯ್ಯ ಹಿರೇಮಠ್ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳನ್ನು ಆಲಿಸಿದರು.
ಆಶ್ರಮದಲ್ಲಿ ತಂಗಿರುವ ವೃದ್ಧರ ಆರೋಗ್ಯ, ದಿನನಿತ್ಯದ ಆರೈಕೆ, ಉಟೋಪಚಾರ, ವಸತಿ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಪಡೆದರು ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಸಂಸ್ಥೆ ಓದಗಿಸುತ್ತಿರುವ ಸೇವೆಯ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು. ಹೆಚ್ಚು ಆರಾಮದಾಯಕ ಮತ್ತು ಗೌರವಯುತವಾಗಿ ಬದುಕಲು ಅಗತ್ಯವಾದ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಚನ್ನರಾಜ ಸೂಚನೆ ನೀಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾರ್ ಎಂ.ಎನ್, ಸಿಡಿಪಿಒ ಸುಮಿತ್ರಾ ಡಿ.ಬಿ, ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ, ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಸುರೇಖಾ ಪಾಟೀಲ, ಪ್ರಾಚಾರ್ಯ ಕಿರಣ ಚೌಗಲಾ, ಕುಮಾರಿ ಪೂರ್ಣಿಮಾ ಕುಮಾರಿ. ಯಮುನಾ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 