ಮುಂಬೈ, ಅ.23: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ನಾಳೆ ಅಭ್ಯಥರ್ಿಗಳ ಹಣೆಬರಹ ಪ್ರಕಟವಾಗಲಿದೆ. ಸೋಮವಾರ ಒಂದೇ ಹಂತದಲ್ಲಿ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳು ಹಾಗೂ ಹರ್ಯಾಣದ 90 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
ಮಹಾರಾಷ್ಟ್ರದಲ್ಲಿ ಒಟ್ಟಾರೆ ಶೇಕಡಾ 61ರಷ್ಟು ಮತದಾನವಾಗಿತ್ತು. ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮುಂದಿನ ತಿಂಗಳ 9ರಂದು ಕೊನೆಗೊಳ್ಳಲಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿದಿದ್ದ 235 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 3,237 ಅಭ್ಯರ್ಥಿಗಳ ಭವಿಷ್ಯ ನಾಳೆ ಪ್ರಕಟವಾಗಲಿದೆ.
ರಾಜ್ಯಾದ್ಯಂತ ವಿವಿಧ ಮತ ಎಣಿಕೆ ಕೇಂದ್ರಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೆ, ಮೂರು ಹಂತದ ಭದ್ರತಾ ವ್ಯವಸ್ಥೆಯಲ್ಲಿ, 1,12,328 ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳು 24 ಗಂಟೆಗಳ ಸಿಸಿಟಿವಿ ಕಣ್ಗಾವಲಿನಲ್ಲಿವೆ. ಜಿಲ್ಲಾಡಳಿತ ಮತ ಎಣಿಕೆಗೆ ಸಜ್ಜಾಗಿದ್ದು, ಒಟ್ಟಾರೆಯಾಗಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರಧಾನ ಕಚೇರಿಯಲ್ಲಿ 48 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಂಪೂರ್ಣ ಎಣಿಕೆಯ ಪ್ರಕ್ರಿಯೆಯನ್ನು ವೀಡಿಯೊ ರೆಕಾಡರ್್ ಮಾಡಲಾಗುತ್ತದೆ. ಹರಿಯಾಣದಲ್ಲಿ, ಉಚಾನಾ, ಪೃಥ್ಲಾ, ಕೊಸ್ಲಿ, ಬೀನ್ ಮತ್ತು ನಾನರ್ೌಂಡ್ ವಿಧಾನಸಭಾ ಕ್ಷೇತ್ರಗಳ ತಲಾ ಒಂದು ಮತಗಟ್ಟೆಗಳಲ್ಲಿ ಮರು-ಮತದಾನ ಇಂದು ನಡೆಯುತ್ತಿದೆ. ಚುನಾವಣಾ ಆಯೋಗದ ನಿದರ್ೆಶನದ ಮೇರೆಗೆ ಮರು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಸಂಜೆ 6 ರವರೆಗೆ ಮುಂದುವರಿಯಲಿದೆ.