ಕೊಪ್ಪಳ 11: ಜನಸಂಖ್ಯೆ ಸ್ಪೋಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ಇದರಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್ ಪೆದ್ದಪ್ಪಯ್ಯ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಕೊಪ್ಪಳ ತಾಲೂಕ್ ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ``ವಿಶ್ವ ಜನಸಂಖ್ಯಾ ದಿನಾಚರಣೆ'' ಪ್ರಯುಕ್ತ ಗುರುವಾರದಂದು ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜನಸಂಖ್ಯೆಯಲ್ಲಿ ವಿಶ್ವದಲ್ಲಿ ಚೀನಾ ದೇಶ ಮೊದಲ ಸ್ಥಾನದಲ್ಲಿ ಇದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ಜುಲೈ 11 ರಂದು ''ವಿಶ್ವ ಜನಸಂಖ್ಯಾ ದಿನಾಚರಣೆ'' ಇಡೀ ದೇಶದ್ಯಾಂತ ಆಚರಿಸಲಾಗುತ್ತದೆ. ಜನಸಂಖ್ಯೆ ಸ್ಪೋಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತವೆ. ದೇಶದ ನೈಸಗರ್ಿಕ ಸಂಪತ್ತು ಭೂಮಿ, ಇತರೇ ಸಂಪನ್ಮೂಲ ಇದ್ದಷ್ಟೇ ಇರುತ್ತದೆ. ಆದರೆ ಜನಸಂಖ್ಯೆ ಮಾತ್ರ ನಾಗಲೋಟದಿಂದ ಏರುತ್ತಲಿದೆ. ಜನಸಂಖ್ಯೆ ಸ್ಪೋಟದಿಂದ ಆಹಾರ, ನೀರು, ಬಟ್ಟೆ ಹಾಗೂ ಖನಿಜಗಳ ಕೊರತೆ, ಸಸ್ಯ ಸಂಪತ್ತಿನ ಕೊರತೆ, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಕೊರತೆ ಮತ್ತು ವಾಯು, ಜಲ, ಶಬ್ದ ಮಾಲಿನ್ಯ ಉಂಟಾಗುತ್ತದೆ. ಜನಸಂಖ್ಯೆ ಹೆಚ್ಚಳದಿಂದ ನಗರ ವ್ಯಾಪ್ತಿಯ ಕೊಳಚೆ ಪ್ರದೇಶಗಳು ಸಹ ಹೆಚ್ಚಾಗುತ್ತವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುತ್ತೇವೆ. ಆದ್ದರಿಂದ ಭಾರತೀಯ ಪ್ರತಿಯೊಬ್ಬ ಪ್ರಜೆಗಳು ಜನಸಂಖ್ಯೆ ನಿಯಂತ್ರಣ ಬಗ್ಗೆ ಅರಿವು ಮೂಡಿಸಬೇಕು. ಮದುವೆ ವಯಸ್ಸು, ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಮತ್ತು ಶ್ವಾಶತ ವಿಧಾನಗಳ ಬಗ್ಗೆ ವಿವಿಧ ಸಂಘ ಸಂಸ್ಥೆಗಳು ಇಲಾಖೆಯವರುದೊಂದಿಗೆ ಕೈಜೋಡಿಸಿ, ಸಹಕರಿಸಬೇಕು. ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳತ್ತದೆ. ಆದ್ದರಿಂದ ಪ್ರತಿಯೊಬ್ಬರು ಜನಸಂಖ್ಯೆ ನಿಯಂತ್ರಣ ತರುವಲ್ಲಿ ಸಹರಿಸಬೇಕು. ಶಿಕ್ಷಣ ಇಲಾಖೆಯವರು ಕಾಲೆಜು ವಿದ್ಯಾಥರ್ಿಗಳಿಗೆ ಅರಿವು ಮೂಡಿಸುವುದು, ಭಾಷಣ ಸ್ಪಧರ್ೆ ಏರ್ಪಡಿಸುವುದರ ಮೂಲಕ ಜಾಗೃತಿ ಮೂಡಿಸುವುದು. ಹಾಗೂ ಆಶಾ ಅಂಗನವಾಡಿ ಕಾರ್ಯಕತರ್ೆಯರು ಮನೆ ಮನೆ ಬೇಟಿ ನೀಡಿದಾಗ ಜನಸಂಖ್ಯೆ ನಿಯಂತ್ರಣ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್ ಪೆದ್ದಪ್ಪಯ್ಯರವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಎಸ್ ಯರಗಲ್ಲ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಟಿ ಲಿಂಗರಾಜ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಹೇಶ, ಬಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಂಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಈರಣ್ಣ ಪಾಂಚಾಳ, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ, ಡಾ. ವೆಂಕಟೇಶ, ಡಾ.ಪ್ರಶಾಂತ, ಜಿಲ್ಲಾ ಪ್ರಭಾರಿ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹಿರಿಯ ಆರೋಗ್ಯ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕ ಕೇಂದ್ರ ವಿಧ್ಯಾಥರ್ಿನಿಯರು, ಆಶಾ ಕಾರ್ಯಕತರ್ೆಯರು, ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು, ಸಿಬ್ಬಂದಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವರ್ಷದ ಘೋಷಣೆ ``ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ ತಾಯಿ ಮತ್ತು ಮಗುವಿನ ಆರೋಗ್ಯ ಪೂರ್ಣ ತಯಾರಿ'' ಎಂಬುವುದಾಗಿದೆ. ಜನಜಾಗೃತಿ ಜಾಥಾ ಕಾರ್ಯಕ್ರಮವು ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಡಾ. ಸಿಂಪಿಲಿಂಗಣ್ಣ ರಸ್ತೆ, ನಗರ ಪೋಲಿಸ್ ಸ್ಟೇಷನ್ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆಗೆ ಬರಲಾಯಿತು. ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಜನಸಂಖ್ಯೆಗೆ ಸಂಬಂಧಿಸಿದ ಜಾನಪದ ಗೀತೆ ಘೋಷಣೆಗಳನ್ನು ಹೇಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಮತ್ತು ''ಚಿಕ್ಕ ಸಂಸಾರ-ಚೊಕ್ಕ ಸಂಸಾರ, ಮದುವೆ ವಯಸ್ಸು ಗಂಡಿಗೇ 21 ವರ್ಷ ಹೆಣ್ಣಿಗೆ 18ವರ್ಷ' ಒಂದು ಮಗುವಿನೊಂದಿಗೆ ಇನ್ನೊಂದು ಮಗುವಿಗೆ ಕನಿಷ್ಠ 03 ವರ್ಷ ಅಂತರವಿರಲಿ ಜುಲೈ, 11 ವಿಶ್ವ ಜನಸಂಖ್ಯಾ ದಿನಾಚರಣೆ ಕುಟುಂಬ ಕಲ್ಯಾಣದ ತಾತ್ಕಾಲಿಕ ಹೊಸ ವಿಧಾನಗಳನ್ನು ಬಳಸಿರಿ ಎಂಬ ಘೋಷಣೆ ಬರಹಗಳನ್ನು ವಿದ್ಯಾಥರ್ಿಗಳು ಕೈಯಲ್ಲಿ ಹಿಡಿದುಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.