ಮುಂಬೈ, ಜೂ 13: ಖ್ಯಾತ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಅಭಿನೇತ್ರಿ ತನುಶ್ರೀ ದತ್ತಾಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.
ತನುಶ್ರೀ ದತ್ತಾಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂಧೇರಿ ನ್ಯಾಯಾಲಯದಲ್ಲಿ "ಬಿ ರಿಪೋರ್ಟ" ಸಲ್ಲಿಸಲಾಗಿದೆ ಎಂದು ಒಶಿವಾರಾ ಪೊಲೀಸ್ ಠಾಣೆಯ ಹಿರಿಯ ಠಾಣಾ ನಿರೀಕ್ಷಣಾಧಿಕಾರಿ ಶೈಲೇಶ್ ಪಸಲ್ವರ್ ತಿಳಿಸಿದ್ದಾರೆ.
ಆರೋಪಿ ವಿರುದ್ಧ ಯಾವುದೇ ಸಾಕ್ಷಿ ಲಭ್ಯವಾಗದ ಕಾರಣ ದುರುದ್ದೇಶ ಪೂರ್ವಕವಾಗಿ ದೂರು ದಾಖಲಿಸಲಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದು, ಅಭಿನೇತ್ರಿ ತನುಶ್ರೀ ದತ್ತಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
"ಬಿ ವರದಿ" ಎಂದರೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲು ಹಾಗೂ ವಿಚಾರಣೆ ನಡೆಸಲು ಯಾವುದೇ ಸಾಕ್ಷಿ ಲಭ್ಯವಾಗಿಲ್ಲ ಎಂದು ಸಲ್ಲಿಸಿದ ವರದಿಯಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.