ಗಂಗಾವತಿ 07: ವೇಗವಾಗಿ ಬದಲಾಗುತ್ತಿರುವ ತಾಂತ್ರಿಕ ಜಗತ್ತಿನಲ್ಲಿಔದ್ಯೋಗಿಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ಕಡಿಮೆ ಇರುವ ಅಂಶವನ್ನು ಪರಿಗಣಿಸಿ ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಯನ್ನು ಹೆಚ್ಚಿಸಲು ನಮ್ಮ ಶ್ರೀ ವಿದ್ಯಾನಿಕೇತನ ಪದವಿ ಕಾಲೇಜು ವಡ್ಡರಹಟ್ಟಿ, ಗಂಗಾವತಿ ಸಂಸ್ಥೆಯು “ಭಾರತದ ಬೆಳವಣಿಗೆಯ ಭಾಗವಾಗಿ ಗ್ರಾಮೀಣ ಯುವಕರನ್ನು ಸಬಲೀಕರಣಗೊಳಿಸುವ” ಸದುದ್ಧೇಶವನ್ನು ಹೊಂದಿರುವ ರಾಜ್ಯದಲ್ಲಿಯೇ ಅತ್ಯಂತ ಹೆಸರಾಂತ ಕೌಶಲಾಭಿವೃದ್ಧಿ ತರಬೇತಿ ಸಂಸ್ಥೆಯಾದ ದೇಶಪಾಂಡೆ ಪೌಂಡೇಶನ್ ಹುಬ್ಬಳ್ಳಿ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.
ದೇಶಪಾಂಡೆ ಪೌಂಡೇಶನ ಸಹಯೋಗದಲ್ಲಿ ನಮ್ಮ ಪದವಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಓದ್ಯೋಗಿಕ ಕೌಶಲ್ಯಗಳನ್ನು ಹೆಚ್ಚಿಸುವ ತರಬೇತಿಯನ್ನು ನೀಡಿ, ಉದ್ಯೋಗಾವಕಾಶಗಳನ್ನು ನಮ್ಮ ವಿದ್ಯಾರ್ಥಿಗಳಿಗೆ ಕಲ್ಪಿಸುವ ಉದ್ದೇಶದಿಂದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಇದಲ್ಲದೆ ಇತರೆ ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳೂ ಸಹ ಓದ್ಯೋಗಿಕ ಕೌಶಲ್ಯಗಳನ್ನು ಹೆಚ್ಚಿಸುವ ತರಬೇತಿಯನ್ನು ನಮ್ಮ ಕಾಲೇಜಿನ ಮೂಲಕ ಪಡೆದುಕೊಳ್ಳಬಹುದಾಗಿದ್ದು, ನಮ್ಮ ಗ್ರಾಮೀಣ ಪ್ರದೇಶದ ಹೆಚ್ಚು ವಿದ್ಯಾರ್ಥಿಗಳು ಇದರ ಅನುಕೂಲವನ್ನು ಪಡೆದುಕೊಳ್ಳಬೇಕೆಂದು ಕೋರಲಾಗಿದೆ.