ಕೋವಿಡ್-19: ಅಮೆರಿಕ, ಬ್ರೆಜಿಲ್, ರಷ್ಯಾದ ಬಳಿಕ, ಭಾರತದಲ್ಲಿ ಹೆಚ್ಚಿದೆ ಪ್ರಕರಣ
ನವದೆಹಲಿ, ಮೇ 30, ಅಮೆರಿಕ, ಬ್ರೆಜಿಲ್ ಮತ್ತು ರಷ್ಯಾದ ನಂತರ, ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ.ಕಳೆದ ಒಂದು ವಾರ, ದೇಶದಲ್ಲಿ ಪ್ರತಿದಿನ ಸರಾಸರಿ 6,952 ಹೊಸ ರೋಗಿಗಳು ಕಾಣಿಸಿಕೊಂಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಮಾರ್ಚ್ 23 ರಂದು ಬೆಳಿಗ್ಗೆ 8 ರ ಹೊತ್ತಿಗೆ ದೇಶದಲ್ಲಿ ಒಟ್ಟು 1,25,101 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಂಡುಬಂದಿದ್ದವು. ಈ ಸಂಖ್ಯೆ ಶನಿವಾರ ಬೆಳಿಗ್ಗೆ 1,73,763 ಕ್ಕೆ ಏರಿದೆ. ಹೀಗಾಗಿ, ಒಂದು ವಾರದಲ್ಲಿ 48,662 ಹೊಸ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ, 7,964 ರೋಗಿಗಳಲ್ಲಿ ಸೋಂಕು ದೃಢಪಟ್ಟಿದೆ.
ಈ ಸಾಂಕ್ರಾಮಿಕ ರೋಗದ ಹೊಸ ಪ್ರಕರಣಗಳು ಭಾರತಕ್ಕಿಂತ ಅಮೆರಿಕ, ಬ್ರೆಜಿಲ್ ಮತ್ತು ರಷ್ಯಾಗಳಲ್ಲಿ ವೇಗವಾಗಿ ಹರುಡತ್ತಿವೆ. ಅಮೆರಿಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭಿಸಿದರೆ, ಬ್ರೆಜಿಲ್ ಮತ್ತು ಭಾರತದಲ್ಲಿ ಇದು ಹೆಚ್ಚುತ್ತಿದೆ. ರಷ್ಯಾದಲ್ಲಿ ಹೆಚ್ಚುತ್ತಿರುವ ಸೋಂಕಿನ ವೇಗ ಬಹುತೇಕ ಸ್ಥಿರವಾಗಿರುತ್ತದೆ.ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ, ಕಳೆದ ಒಂದು ವಾರ ಅಮೆರಿಕದಲ್ಲಿ 1,50,072 ಹೊಸ ಪ್ರಕರಣಗಳು ವರದಿಯಾಗಿದ್ದು, ದಿನದ ಸರಾಸರಿ 21,439 ಪ್ರಕರಣ ವರದಿಯಾಗಿವೆ. ಬ್ರೆಜಿಲ್ ನಲ್ಲಿ ಈ ಸಂಖ್ಯೆ 17,177, ರಷ್ಯಾದಲ್ಲಿ 8,739 ಎಂದು ವರದಿ ಮಾಡಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 