ಕೋವಿಡ್-19: ಅಮೆರಿಕದಲ್ಲಿ 60 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ
ವಾಷಿಂಗ್ಟನ್, ಏ.30,ವಿಶ್ವದಲ್ಲಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದೆ. ಇನ್ನು ಈ ಸೋಂಕಿಗೆ ಅಮೆರಿಕ ನಲುಗಿ ಹೋಗಿದೆ. ಯುಎಸ್ ನಲ್ಲಿ ಈ ವೈರಸ್ ನಿಂದ 60,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 10 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ.ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕೇಂದ್ರ (ಸಿಎಸ್‌ಎಸ್‌ಇ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಅಮೆರಿಕದಲ್ಲಿ ಸಾವಿನ ಸಂಖ್ಯೆ 60 ಸಾವಿರವನ್ನು ದಾಟಿ 60876 ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದ್ದು ಪೀಡಿತರ ಸಂಖ್ಯೆ 10,38,451 ಕ್ಕೆ ತಲುಪಿದೆ.
ಅಮೆರಿಕದಲ್ಲಿ ಲಕ್ಷಕ್ಕೂ ಹೆಚ್ಚು ಜನರು ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರಾಂತ್ಯಗಳು ಕರೋನಾದಿಂದ ಹೆಚ್ಚು ಪರಿಣಾಮ ಬೀರಿದೆ. ನ್ಯೂಯಾಕ್ ನಲ್ಲಿ ಮೂರು ಲಕ್ಷ ಕರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟರೆ, 22 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನ್ಯೂಜೆರ್ಸಿಯಲ್ಲಿ ಈವರೆಗೆ ಒಂದು ಲಕ್ಷಕ್ಕೂ ಹೆಚ್ಚು ಕರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಈ ಸಾಂಕ್ರಾಮಿಕ ರೋಗದಿಂದ ಆರು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 