ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರ ಸಾವು

ಮಂಗಳೂರು, ಜೂ.28: ಕೋವಿಡ್‌-19 ಸೋಂಕಿನಿಂದ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.ಬಂಟ್ವಾಳ ತಾಲೂಕಿನ ಲೊರೊಟೋಪದವಿನ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕು ದೃಢಪಟ್ಟಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಇತರ ಕೆಲವು ಕಾಯಿಲೆಗಳೂ ಇದ್ದವು ಎನ್ನಲಾಗಿದೆ.31 ವರ್ಷದ ಇಡ್ಯಾ ಯುವಕ ಕೂಡ ಅನಾರೋಗ್ಯ ಪೀಡಿತನಾಗಿದ್ದ. ಈತನನ್ನು ಸರ್ಕಾರಿ ವೆನ್ಲಾಕ್ ಕೋವಿಡ್‌ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಗಂಟಲು ದ್ರವ ಪರೀಕ್ಷಿಸಿದಾಗ ಪಾಸಿಟಿವ್ ವರದಿ ಬಂದಿತ್ತು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಈ ಇಬ್ಬರ ಸಾವಿನೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದರು.