ದೇಶದಲ್ಲಿ ಕೋವಿಡ್–19 ಪ್ರಕರಣಗಳ ಹೆಚ್ಚಳ, 5 ಸಾವಿರ ಸಕ್ರಿಯ ಪ್ರಕರಣ
Covid-19 cases increase in the country, 5 thousand active cases
ನವದೆಹಲಿ 06: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಐದು ಸಾವಿರ ಗಡಿ ದಾಟಿವೆ.
ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು(1,679) ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ ಗುಜರಾತ್(615), ಪಶ್ಚಿಮ ಬಂಗಾಳ(596) ಮತ್ತು ದೆಹಲಿ(592) ರಾಜ್ಯಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೊರಡಿಸಿದ ಮಾಹಿತಿಯಲ್ಲಿ ಹೇಳಲಾಗಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ, ಐಸೋಲೇಷನ್ ಬೆಡ್ಗಳು, ವೆಂಟಿಲೇಟರ್ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಸದ್ಯ ಭಾರತದಲ್ಲಿ 5,364 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಸೋಂಕಿನ ತೀವ್ರತೆ ಕಡಿಮೆ ಇದೆ. ಬಹಳಷ್ಟು ಸೋಂಕಿತರು ಮನೆ ಆರೈಕೆಯಲ್ಲಿದ್ದಾರೆ. ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
2025ರ ಜನವರಿಯಿಂದ ಇಲ್ಲಿಯವರೆಗೆ ದೇಶದಲ್ಲಿ 55 ಸಾವುಗಳು ವರದಿಯಾಗಿವೆ. ಮೇ 22 ರಂದು ದೇಶದಲ್ಲಿ ಒಟ್ಟು 257 ಸಕ್ರಿಯ ಪ್ರಕರಣಗಳಿದ್ದವು. ಈ ಸಂಖ್ಯೆ ಮೇ 26ರ ಹೊತ್ತಿಗೆ 1,010ಕ್ಕೆ ಏರಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 