ಯಡೋಗಾ ರಸ್ತೆ ಬದಿಯಲ್ಲಿ ಅಳವಡಿಸಿದ ಪೈಪುಗಳಲ್ಲಿ ಬಿರುಕು ಬಿಟ್ಟ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿ
Cracks in pipes installed on Yadoga Road disrupt vehicular traffic
ಲೋಕದರ್ಶನ ವರದಿ
ದಾಂಡೇಲಿ 22 : ದಾಂಡೇಲಿಯ ಕಾಳಿನದಿಯಿಂದ ಬೃಹತ್ ಪೈಪುಗಳ ಮೂಲಕ ನೀರು ಹರಿಸಿ ಕೆರೆ-ಬಾಂದಾರಗಳನ್ನು ತುಂಬಿಸುವ ಕಾಮಗಾರಿ ಮುಕ್ತಾಯ ಹಂತ ತಲುಪಿದ ಸಂದರ್ಭದಲ್ಲಿ, ಪರೀಶೀಲನಾ ಹಂತದಲ್ಲೇ ಪೈಪುಗಳ ಒಡೆತದಿಂದ ನೀರು ಕಾರಂಜಿಯಂತೆ ಚಿಮ್ಮಿ ರಸ್ತೆ ತುಂಬ ಹರಿದ ಘಟನೆ ರೈತರಲ್ಲಿ ಆತಂಕ ಹುಟ್ಟಿಸಿದೆ. ಯಡೋಗಾ ರಸ್ತೆ ಬದಿಯಲ್ಲಿ ಅಳವಡಿಸಿದ ಪೈಪುಗಳಲ್ಲಿ ಬಿರುಕು ಬಿಟ್ಟ ಪರಿಣಾಮ ನೀರು ಭಾರೀ ಒತ್ತಡದಿಂದ ಹೊರಚಿಮ್ಮಿ ರಸ್ತೆ ಮೇಲೆ ಧಾರಾಕಾರವಾಗಿ ಹರಿದಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳೀಯರು ತಕ್ಷಣವೆ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ತಾತ್ಕಾಲಿಕವಾಗಿ ನೀರಿನ ಹರಿವನ್ನು ನಿಯಂತ್ರಿಸುವ ಕ್ರಮ ಕೈಗೊಳ್ಳಲಾಯಿತು.
ಇದೇ ಯೋಜನೆ ವಿಳಂಬವಾಗುತ್ತಿರುವದನ್ನು ಖಂಡಿಸಿ ಇತ್ತಿಚೆಗೆ ರೈತರು ಪಾದಯಾತ್ರೆ ನಡೆಸಿ ಹಳಿಯಾಳ ಬಂದ್ ಕರೆ ನೀಡಿ ತೀವ್ರ ಆಕ್ರೋಷ ವ್ಯಕ್ತ ಪಡಿಸಿದ್ದರು. ನೀರಾವರಿ ಸೌಲಭ್ಯಕ್ಕಾಗಿ ವರ್ಷಗಳಿಂದ ಕಾಯುತ್ತಿರುವ ರೈತರಿಗೆ ಈ ಯೋಜನೆ ಭರವಸೆಯ ಕಿರಣವಾಗಿದ್ದು, ಈದೀಗ ತಾಂತ್ರಿಕ ದೋಷಗಳು ಬೆಳಕಿಗೆ ಬರುತ್ತಿರುವದು ಮತ್ತಷ್ಟು ನಿರಾಸೆ ಮೂಡಿಸಿದೆ. ದೀಗ ಯೋಜನೆ ಶೀಘ್ರ ಪಾರಂಭಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿರುವ ನಡುವೆಯೆ ಈ ಘಟನೆ ನಡೆದಿರುವದು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ರೈತರ ಬಹುಕಾಲದ ಕನಸು ನನಸಾಗುವದೇ ಅಥವಾ ಇನ್ನಷ್ಟು ಸಮಸ್ಯೆಗಳು ಎದುರಾಗುವದೇ ಎಂಬ ಆತಂಕ ಈ ಪ್ರದೇಶದಲ್ಲಿ ವ್ಯಕ್ತವಾಗುತ್ತಿದೆ. ಕೂಡಲೇ ಯೋಜನೆಯ ಅಡೆತಡೆಗಳನ್ನು ನಿವಾರಿಸಿ ಕೆರೆ ಬಾಂದಾರಗಳನ್ನು ತುಂಬಿಸಿ ನೀರಾವರಿಗೆ ಅನುಕೂಲಮಾಡಿ ಕೊಡುವಂತೆ ರೈತರು ಆಗ್ರಹಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 