ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ: ಡಾ. ಮಲ್ಲನಗೌಡ ಬಿರಾದಾರ್
Create awareness about cancer: Dr. Mallanagouda Biradar
ವಿಜಯಪುರ, ಆ.28: ಬಾಯಿ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ಕುರಿತು ಪ್ರತಿಯೊಬ್ಬರೂ ಜಾಗೃತರಾಗಬೇಕು. ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಪರಿಸರದ ಅಂಶಗಳು ಕ್ಯಾನ್ಸರ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆರೋಗ್ಯ ಸೌಧ ಸಭಾಭವನದಲ್ಲಿ ಗುರುವಾರ ಸಿಂದಗಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಆರೋಗ್ಯಕರ ಆಹಾರ ಸೇವನೆ ಹಾಗೂ ತಂಬಾಕು ಮತ್ತು ಮದ್ಯಪಾನದಿಂದ ದೂರವಿರುವುದರ ಜೊತೆಗೆ, ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆಹಚ್ಚುವುದರಿಂದ ಅಪಾಯದಿಂದ ಪಾರಾಗಬಹುದು ಎಂದು ಅವರು ಸಲಹೆ ನೀಡಿದರು.
ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ವ್ಯವಸ್ಥಾಪಕ ಡಾ. ಗುರುರಾಜ ಕುಲಕರ್ಣಿ ಮಾತನಾಡಿ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ಉಂಟಾಗಲು ಕಾರಣಗಳು ಮತ್ತು ಅವುಗಳ ತಪಾಸಣಾ ವಿಧಾನಗಳ ಕುರಿತು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕ್ಯಾನ್ಸರ್ ಜಾಗೃತಿ ಕೈಪಿಡಿಗಳನ್ನು ವಿತರಿಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ್ ಇನಾಮದಾರ್ ಮಾತನಾಡಿ, ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಿಇಒ ಡಾ. ಗುರು ಸುಹಾಸ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಎನ್ಸಿಡಿ ಕಾರ್ಯಕ್ರಮ ಸಂಯೋಜಕಿ ಡಾ. ಪ್ರಿಯದರ್ಶಿನಿ ಪಾಟೀಲ, ಸಿಂದಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎ.ಎ. ಮಾಂಗಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಕೋಳೂರ, ಆಶಾ ಮೆಂಟರ್ ಮಲ್ಲಮ್ಮ, ತಾಲ್ಲೂಕು ಶಿಕ್ಷಣಾಧಿಕಾರಿ ರೇಖಾ ದಶವಂತ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಿಂದಗಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 