ಅಲೆಮಾರಿ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ.ಆನಂದ ಕೆ
Create awareness about government facilities for the nomadic community: DC Dr. Ananda K
ವಿಜಯಪುರ, ಸೆಪ್ಟೆಂಬರ್, 25 : ಅಲೆಮಾರಿ ಜನಾಂಗಕ್ಕೆ ಸರ್ಕಾರದ ಜಾರಿಗೊಳಿಸಿದ ವಿವಿಧ ಯೋಜನೆಗಳನ್ನು ಸಮರ್ಕವಾಗಿ ಅನುಷ್ಠಾನಗೊಳಿಸಿ, ಈ ಜನಾಂಗಕ್ಕೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಹಾಗೂ ಅರಿವು ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರಿಗೆ ಸರ್ಕಾರ ನೀಡುವ ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಇವರು ಆರ್ಥಿಕವಾಗಿ ಸಬಲ ಹಾಗೂ ಸದೃಢವಾಗಿ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಸರ್ಕಾರದ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ತಾಲೂಕಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಕಾಲಕಾಲಕ್ಕೆ ಸಭೆಗಳನ್ನು ಕೈಗೊಂಡು ಜನರಿಗೆ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳಿಗೆ ಸಮರ್ಕವಾಗಿ ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಹಾಗೂ ನಿವೇಶನ ರಹಿತರಿಗೆ ಆದ್ಯತೆ ಮೇಲೆ ನೀಡುವುದು, ಜನವಸತಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವಂತೆ ಕಾರ್ಯ ಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.
ಈ ಅಲೆಮಾರಿ ಸಮುದಾಯದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಶೇ.10ರಷ್ಟು ಪ್ರವೇಶಾತಿ ಹಾಗೂ ವಿದ್ಯಾರ್ಥಿ ವೇತನ ವ್ಯವಸ್ಥೆಯಿದ್ದು, ಈ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಮುಂದುವರೆಯಲು ಸಹಕಾರಿಯಾಗಿದೆ ಎಂದು ತಿಳಿಸಿದ ಅವರು ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರಿಗೆ ಸ್ವಾವಲಂಬಿ ಸಾರಥಿ, ಉದ್ಯಮ ಶೀಲತಾ, ಸ್ವಯಂ ಉದ್ಯೋಗ ನೇರ ಸಾಲ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳಿವೆ ಇದರ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಸಮರ್ಕ ದಾಖಲೆಗಳನ್ನು ಪರೀಶೀಲಿಸಿ, ಯೋಜನೆಯ ಲಾಭ ದೊರಕಿಸಲು ಕ್ರಮ ವಹಿಸಬೇಕು. ಯಾವುದೇ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯಲು ವಿಳಂಬವಾಗದಂತೆ ತ್ವರಿತವಾಗಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿವಿ ಕುಂಬಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌಧಾಗರ, ಸಮಾಜ ಕಲ್ಯಾಣದ ಉಪ ನಿರ್ದೇಶಕರಾದ ಮಹೇಶ ಪೋತ್ದಾರ, ಸಹಾಯಕ ನಿರ್ದೇಶಕರಾದ ಬಿ.ಜೆ.ಇಂಡಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಸಂಗಣಗೌಡ ಪಾಟೀಲ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಸುನೀಲ ಭಜಂತ್ರಿ, ಸಂಜೀವಕುಮಾರ ದಶವಂತ, ಧರ್ಮಣ್ಣ ವಿಭೂತಿ, ರಾಹುಲ ಶಿಳ್ಳಿಕ್ಯಾತರ ಸೇರಿದಂತೆ ತಾಲೂಕಿನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 