ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
Create awareness about the Manual Scavenging Prohibition Act - District Magistrate Dr. Vijayamahante
ಲೋಕದರ್ಶನ ವರದಿ
ಹಾವೇರಿ 25: ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾ ಮಟ್ಟದ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಚರ್ಮ ಕುಶಲಕರ್ಮಿಗಳ ಕುಂದುಕೊರತೆಗಳ ನಿವಾರಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಮೀಕ್ಷೆಯಲ್ಲಿ ಗುರುತಿಸಲಾದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ, ಸಹಾಯಧನ- ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಆಯ್ಕೆಗೆ ಆದ್ಯತೆ ನೀಡಿಬೇಕು. ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಆ ಯೋಜನೆ ಸದುಪಯೋಗ ಪಡೆದುಕೊಂಡಿರುವ ಬಗ್ಗೆ ಪರೀಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಚರ್ಮ ಕುಶಲಕರ್ಮಿಗಳಿಗೆ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಹಾಗೂ ವಿವಿಧ ಯೋಜನೆಗಳಡಿ ಸೌಲಭ್ಯ ತಲುಪಿಸಬೇಕು ಎಂದು ಲಿಡಕರ್ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಚರ್ಮ ಕುಶಲಕರ್ಮಿಗಳ ಸಂಖ್ಯೆ ಹಾಗೂ ವಿವಿಧ ಯೋಜನೆಗಳ ಸೌಲಭ್ಯಗಳ ಮಾಹಿತಿ ಪಡೆದ ಫಲಾನುಭವಿಗಳ ಮಾಹಿತಿ ನೀಡಲು ತಡಬಡಾಯಿಸಿದ ಲೀಡಕರ್ ಜಿಲ್ಲಾ ವ್ಯವಸ್ಥಾಪಕರನ್ನು ತರಾಟೆಗೆತೆಗೆದುಕೊಂಡ ಜಿಲ್ಲಾಧಿಕಾರಿಗಳು, ಯಾವ ಫಲಾನುಭವಿಗೆ ಸೌಲಭ್ಯ ನೀಡಲಾಗಿದೆ ಎಂದು ಗೊತ್ತಿಲ್ಲ, ಜಿಲ್ಲೆಯ ಚರ್ಮ ಕುಶಲಕರ್ಮಿಗಳ ಸಂಖ್ಯೆ ಗೊತಿಲ್ಲ, ಏನು ಕೆಲಸ ಮಾಡ್ತೀರಿ ಎಂದು ರೇಗಿದರು ಹಾಗೂ ಲಿಡಕರ್ ಜಿಲ್ಲಾ ವ್ಯವಸ್ಥಾಪಕರ ಸಸ್ಪೆನ್ಸ್‌ಗೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಚರ್ಮ ಕುಶಲಕರ್ಮಿಗಳ ಕುಂದುಕೊರತೆಗಳ ನಿವಾರಣಾ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಸುನೀಲ್ ಬೆಟಗೇರಿ, ಮಾರುತಿ ಹಂಜಗಿ, ಪೃಥ್ವಿರಾಜ ಬೆಟಗೇರಿ, ಎಚ್.ಡಿ.ಹೊನ್ನಕ್ಕಳವರ ಹಾಗೂ ಗುತ್ತೆಪ್ಪ ಹರಿಜನ ಅವರು ಅರ್ಹ ಚರ್ಮ ಕುಶಲಕರ್ಮಿಗಳನ್ನು ಗುರುತಿಸಬೇಕು ಹಾಗೂ ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಹಾವೇರಿ ನಗರದಲ್ಲಿ ನಗರಸಭೆಯಿಂದ ನಿರ್ಮಾಣ ಮಾಡಲಾದ ಸಾರ್ವಜನಿಕ ಶೌಚಾಲಯ ನಿರ್ವಹಣೆ, ಮ್ಯಾನ್ಯುಯಲ್ ಸ್ಕಾವೆಂಜರ್‌ಗಳಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರೆಯಬೇಕು ಎಂದು ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಸುಭಾಸ ಬೆಂಗಳೂರು, ಭೀಮಪ್ಪ ಯಲ್ಲಾಪೂರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ, ಜಿಲ್ಲೆಯ ಹಾನಗಲ್ ತಾಲೂಕು ಕೂಸನೂರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಆಡೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಶೇ.24.10ರ ಅನುದಾನದಲ್ಲಿ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಶೇ.20ರಷ್ಟು ಮೀಸಲಿರಿಸಿದ ಅನುದಾನದಲ್ಲಿ ಭೌತಿಕ ಹಾಗೂ ಗುರಿ ಸಾಧಿಸಲಾಗಿದೆ. ಅದೇ ರೀತಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ಪಿ.ಎಂ.ಎ.ವೈ. ಹಾಗೂ ಜಿ+1 ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಗೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಅದೇ ರೀತಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ನೇರ ಸಾಲ ಯೋಜನೆಯಡಿ ಮೂರು ಹಾಗೂ ವಸತಿಯೋಜನೆಯಡಿ ಒಂಭತ್ತು ಫಲಾನುಭವಿಗಳು ಸೌಲಭ್ಯ ಪಡೆದುಕೊಂಡಿದ್ದಾರೆಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಲ್ ವೈ ಶಿರಕೋಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ್, ಉಪ ವಿಭಾಗಾಧಿಕಾರಿಗಳಾದ ಶುಭಂ ಶುಕ್ಲಾ, ಕಲ್ಯಾಣಿ ಕಾಂಬ್ಳೆ, ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್‌ಸ್ಯಾನಿಟರಿ ಲ್ಯಾಟ್ರಿನ್ಸ್ ಮತ್ತು ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಶ್ರೀಮತಿ ಗೌರಮ್ಮ ನಾಗರಾಜ ಮಂತ್ರಿ, ಶ್ರೀಮತಿ ಗೀತಾ ನಾರಾಯಣ ನೆಲ್ಲೂರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 