ಬಾಲ್ಯ ವಿವಾಹ, ಪೋಕ್ಸೊ, ವಿವಿಧ ಕಾಯ್ದೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ : ಶಶಿಧರ್ ಕೊಸಂಬೆ
Create awareness among the public about child marriage, POCSO, and various laws: Shashidhar Kosambe
ಶಶಿಧರ್ ಕೊಸಂಬೆ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆ
ಧಾರವಾಡ 16 : ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ದಿ:13-02-2026 ರಂದು ಆಯೋಜಿಸಿದ್ಧ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣ, ಧಾರವಾಡದಲ್ಲಿ ಹಮ್ಮಿಕೊಂಡ ಪ್ರಗತಿ ಪರೀಶೀಲನಾ ಸಭೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಧಾರವಾಡ.ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ದಿ:13-02-2026 ರಂದು ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ಕುರಿತು ಪ್ರಗತಿ ಪರೀಶೀಲನೆ ಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೊಸಂಬೆ ಇವರ ಅಧ್ಯಕ್ಷತೆಯಲ್ಲಿ ಏರಿ್ಡಸಲಾಗಿತ್ತು.
ಸದರಿ ಸಭೆಯಲ್ಲಿ ಕಾನೂನಿನ ಚೌಕಟ್ಟಿನಡಿಯಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಜೊತೆಗೂಡಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಮನ್ವಯತೆ ಸಾಧಿಸಿ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೊಸಂಬೆ ಅವರು ಹೇಳಿದರು. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳ ಕುರಿತು ಹೆಚ್ಚಾಗಿ ಗಮನ ಹರಿಸಿ, ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಬೇಕು. ಪೊಲೀಸ್ ಠಾಣೆಗಳಲ್ಲಿ ಮಕ್ಕಳ ವಿಚಾರಣೆ ಅವಧಿ ಸಮಯದಲ್ಲಿ ಸಂಜೆಯ ನಂತರ ಮಕ್ಕಳನ್ನು ಪೊಲೀಸ್ ಠಾಣೆಗಳಲ್ಲಿ ಇರಿಸುವಂತಿಲ್ಲ. ಕಾಣೆಯಾದ ಮಕ್ಕಳು ಪತ್ತೆಯಾದ ನಂತರ ಬಾಲ್ಯ ವಿವಾಹ ಅಥವಾ ಪೋಕ್ಸೊ ಅಂತಹ ಪ್ರಕರಣಗಳಾಗಿವೆಯೇ ಎಂದು ವಿಚಾರಿಸಿ ಮುಂದಿನ ತನಿಖೆ ಕೈಗೊಳ್ಳಬೇಕು. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ಮಕ್ಕಳ ರಕ್ಷಣಾ ನೀತಿ 2016ರಲ್ಲಿ ತಿಳಿಸಿರುವಂತೆ ಶಾಲಾ ವಾಹನಗಳ ಚಾಲಕರ ಪೊಲೀಸ್ ಪರೀಶೀಲನೆಯಾಗಿದ್ದರ ಬಗ್ಗೆ ಗಮನಹರಿಸಬೇಕು. ಆರ್.ಸಿ.ಹೆಚ್ ಪೋರ್ಟಲ್ ನಲ್ಲಿ ದಾಖಲಾಗುವ ಬಾಲಗರ್ಭಿಣಿ ಪ್ರಕರಣಗಳ ಸೂಕ್ತ ಕ್ರಮ ತೆಗೆದುಕೊಂಡು ಆಯೋಗಕ್ಕೆ ವರದಿ ಸಲ್ಲಿಸಲು ಸೂಚಿಸಿದರು. ಅಪೌಷ್ಠಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯದಲ್ಲಿ ನಿಗಾವಹಿಸಿ ಕ್ರಮಕೈಗೊಳ್ಳಬೇಕು. ಮಕ್ಕಳ ರಕ್ಷಣಾ ನೀತಿ-2016ರ ಅನ್ವಯ ಶಾಲೆಯಲ್ಲಿ ಸಲಹಾ/ದೂರು ಪೆಟ್ಟಿಗೆಗಳನ್ನು ಅಳವಡಿಸುವುದು, ಮಕ್ಕಳ ಸಹಾಯವಾಣಿ 1098 ಶಾಶ್ವತ ಗೋಡೆ ಫಲಕ, ಕೋಪ್ಟಾ ಕಾಯ್ದೆ-2003ರ ಅನ್ವಯ ಶಾಲಾ ಆವರಣದಲ್ಲಿ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ನಿಷೇಧ ಕಾಯ್ದೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೊಂದಿಗೆ ಕರ್ತವ್ಯ ನಿಷ್ಠೆಯಿಂದ ಜಂಟಿಯಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಬೇಕು ಎಂದು ತಿಳಿಸಿದರು. ಬಾಲ್ಯ ವಿವಾಹ, ಪೋಕ್ಸೊ, ಪ್ರಕರಣ ಸೇರಿದಂತೆ ವಿವಿಧ ಕಾಯ್ದೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರ ಮತ್ತು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಿ ಬಾಲಗರ್ಭಿಣಿ ಹಾಗೂ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ವಿನೋದ ಮುಕ್ತೆದಾರ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು ವಿಶೇಷ ಮಕ್ಕಳ ಪೊಲೀಸ್ ಘಟಕ, ಧಾರವಾಡ ಇವರು ಮಾತನಾಡುತ್ತಾ ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರು ಮಕ್ಕಳ ರಕ್ಷಣೆ ಕುರಿತು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ಧಾರವಾಡ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಗೆ ಮಗುವಿನ ಪ್ರಕರಣಗಳು ಬಂದಾಗ ಮಕ್ಕಳ ಸ್ನೇಹಿ ಪೊಲೀಸ್ ವಾತಾವರಣ ಕಲ್ಪಿಸಿ, ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಮಾಡುವುದಾಗಿ ತಿಳಿಸಿದರು.ದೀಪಾ ಜಾವೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಧಾರವಾಡ ಇವರು ಪಾಲನೆ ಹಾಗೂ ಪೋಷಣೆ ಅಗತ್ಯವಿರುವ ಮಕ್ಕಳು ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಮ್ಮ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕ್ರೀಯಾತ್ಮಕವಾಗಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ಮಾನ್ಯ ಅಧ್ಯಕ್ಷರು ತಿಳಿಸಿದಂತಹ ಸಲಹೆ ಸೂಚನೆಗಳನ್ನು ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಂಡು ವಿವಿಧ ಇಲಾಖೆಗಳ ಜೊತೆಗೆ ಮಕ್ಕಳ ಸಂಬಂಧಿಸಿದ ಪ್ರಕರಣಗಳ ನಿರ್ವಹಣೆ, ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಕಾಪಾಡುವಲ್ಲಿ ಬದ್ಧರಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿವಾನಂದ ಕಟಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಧಾರವಾಡ, ವಿಜಯಕುಮಾರ ವಿಟಿ, ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು, ಪೊಲೀಸ್ ಆಯುಕ್ತರ ಕಛೇರಿ ಹುಬ್ಬಳ್ಳಿ-ಧಾರವಾಡ., ವಿಜಯಲಕ್ಷ್ಮೀ ಪಾಟೀಲ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಅಧಿಕಾರಿ, ಮ.ಮ.ಅ.ಇ ಧಾರವಾಡ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಜರಿದ್ದರು. ಮಹಮ್ಮದ ಅಲಿ ತಹಶೀಲ್ದಾರ, ಲೀಗಲ್ ಕಂ ಪ್ರೊಬೇಶನ್ ಆಫಿಸರ, ಧಾರವಾಡ ಇವರು ಕಾರ್ಯಕ್ರಮವನ್ನು ಸ್ವಾಗತಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 