ಗ್ರಾಮ ಪಂಚಾಯತಿವಾರು ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ
Create awareness to prevent violence at the Gram Panchayat level - District Magistrate
ಹಾವೇರಿ 31: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆ ಸಮುದಾಯದ ಅಭಿವೃದ್ಧಿಗೆ ವೆಚ್ಚಮಾಡಬೇಕು ಎಂದರು.
ಅಧಿಕಾರಿಗಳು ಸಮಾಜದ ಪರವಾಗಿ ಕಾಳಜಿಯಿಂದ ಕೆಲಸ ಮಾಡುತ್ತಾರೆ, ಸಮಾಜದ ಅಭಿವೃದ್ಧಿ ಕೆಲಸಗಳಲ್ಲಿ ಅಡಚಣೆಯಾದ ಸಂದರ್ಭದಲ್ಲಿ, ಸಮಾಜದ ಮುಖಂಡರು ಕಾಮಗಾರಿಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು, ಸಮಾಜದಲ್ಲಿ ಬದಲಾವಣೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಒಂದು ವೇಳೆ ಅಭಿವೃದ್ಧಿಯಾಗದ ಕಾಲೋನಿಗಳ ಬಗ್ಗೆ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಗಮನಕ್ಕೆ ತರಬಹುದು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ, ಅಕ್ಟೋಬರ್ -2025 ರಿಂದ ಡಿಸೆಂಬರ್-2025 ಮಾಹೆವರೆಗೆ 17 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ಮಂಜೂರ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಅವರು ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆಯಾ ಸಮುದಾಯಕ್ಕೆ ವೆಚ್ಚ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಮಾತನಾಡಿ, ದೌರ್ಜನ್ಯ ಪ್ರಕರಣಗಳ ತಡೆಗೆ ಸಮಾಜದ ಮುಖಂಡರ ಸಹಕಾರ ತುಂಬಾ ಅಗತ್ಯವಾಗಿದೆ. ಕಾಯ್ದೆಗಳ ದುರುಪಯೋಗಬಾರದು. ಈ ಹಿನ್ನಲೆಯಲ್ಲಿ ಎಲ್ಲರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಕೃಷಿ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ, ತೋಟಗಾರಿಕೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಜಿಲ್ಲಾ ಸರ್ಕಾರಿ ಅಭಿಯೋಜಕ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 