ನೀರಿನ ಸದ್ಬಳಕೆ, ಸಂರಕ್ಷಣೆಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ
Creating awareness among students about the judicious use and conservation of water
ಲೋಕದರ್ಶನ ವರದಿ
ಗದಗ, ಆ.11 ಜಲ ಸಂರಕ್ಷಣೆ ಮತ್ತು ಸದ್ಬಳಕೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ “ಜಲ ಸಂರಕ್ಷಣೆ ಮತ್ತು ಸದ್ಬಳಕೆ” ಕಾರ್ಯಕ್ರಮದ ಅಂಗವಾಗಿ ಗದಗದ ಸಿಡಿಒ ಜೈನ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಅಂತರ್ಜಲ ಕಚೇರಿ, ಗದಗ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿಜಯನಗರ ಶುಗರ್ಸ್ ಪ್ರೈ.ಲಿ., ಗಂಗಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಅಂತರ್ಜಲ ಕಚೇರಿಯ ಭೂವಿಜ್ಞಾನಿ ಪ್ರವೀಣ ಕರಬಸಣ್ಣವರ ಅವರು ಎಲ್ಲರನ್ನು ಸ್ವಾಗತಿಸಿದರು. ಬಳಿಕ ಭೂವಿಜ್ಞಾನಿ ಮಲ್ಲಪ್ಪ ಕಲ್ಲಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ ಕರಬಸಣ್ಣವರ ಅವರು ವಿದ್ಯಾರ್ಥಿಗಳಿಗೆ ಜಲ ಪ್ರತಿಜ್ಞೆ ಬೋಧಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಸಂತೋಷ ಪಾಟೀಲ್ಗಾಣಿಗೇರ ಅವರು ನೀರಿನ ಮಹತ್ವ, ಪ್ರಸ್ತುತ ನೀರಿನ ಪರಿಸ್ಥಿತಿ ಹಾಗೂ ಭವಿಷ್ಯದಲ್ಲಿ ನೀರಿನ ಸಂರಕ್ಷಣೆಯ ಅಗತ್ಯ ಕುರಿತು ವಿವರಿಸಿದರು.
ವಿಜಯನಗರ ಶುಗರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ಶಂಕರಗೌಡ್ರು ಅವರು ನೀರಿನ ಅವಶ್ಯಕತೆ ಹಾಗೂ ನೀರಿನ ಸದ್ಬಳಕೆಯ ಕುರಿತು ಮಾಹಿತಿ ನೀಡಿದರು.
ಗದಗ ಉಪನಿರ್ದೇಶಕರ ಕಚೇರಿಯ ವಿಷಯ ಪರೀವೀಕ್ಷಕಿ ಗೀತಾ ಕುಲಕರ್ಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನೀರು ಸಂರಕ್ಷಣೆ, ನೀರಿನ ಸದ್ಬಳಕೆ ಹಾಗೂ ಮಳೆನೀರು ಸಂಗ್ರಹಣೆಯ ಮಹತ್ವವನ್ನು ವಿವರಿಸಿದರು.
“ಜಲ ಸಂರಕ್ಷಣೆ ಮತ್ತು ಸದ್ಬಳಕೆ” ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗೀತಾ ಕುಲಕರ್ಣಿ, ಹಿರಿಯ ಭೂವಿಜ್ಞಾನಿ ಸಂತೋಷ ಪಾಟೀಲ್ಗಾಣಿಗೇರ, ವಿಜಯನಗರ ಶುಗರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ತಿರುಮಲರೆಡ್ಡಿ, ಟಿ.ಆರ್. ಬೇವಿನಮರದ, ಎನ್.ಎಂ. ಚಿತ್ರಗಾರ, ಚಿತ್ರಕಲಾ ಸ್ಪರ್ಧೆಯ ನಿರ್ಣಾಯಕರಾದ ಎಚ್.ಎಸ್. ಬಾಳಿಚಿತ್ರ ಹಾಗೂ ಜಿಲ್ಲಾ ಅಂತರ್ಜಲ ಕಚೇರಿಯ ಭೂವಿಜ್ಞಾನಿಗಳಾದ ಮಲ್ಲಪ್ಪ ಕಲ್ಲಾಪುರ, ಪ್ರವೀಣ ಕರಬಸಣ್ಣವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 