ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ, 1.80 ಲಕ್ಷ ರೂ.ವಶ

ಬೆಂಗಳೂರು, ಜ.31 ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿ 1 ಲಕ್ಷ 80 ಸಾವಿರ ನಗದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ  ಆರೋಪಿ ಕೆಪಿ ಅಗ್ರಹಾರದ 1ನೇ ಕ್ರಾಸ್‌ನ ಪ್ರಮೋದ್ (30)ನಿಂದ 1 ಲಕ್ಷ 80 ಸಾವಿರ ನಗದು,  ಮೊಬೈಲ್‌ನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ  ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಇಂಡಿಯಾ-ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸೋಲು-ಗೆಲುವಿನ  ಬಗ್ಗೆ ಮೊಬೈಲ್‌ನಲ್ಲಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ  ನಡೆಸುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ಆರೋಪಿಯು ಕೆಪಿ ಅಗ್ರಹಾರದ ಸುರೇಶ್ ಜ್ಯುವೆಲರ್ಸ್‌ ಬಳಿ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.