ನವದೆಹಲಿ 18: ಭಾರತ ಕ್ರಿಕೆಟ್ ಆಟಗಾರ ಕೆ.ಎಲ್ ರಾಹುಲ್ 33ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ತಮ್ಮ ಮಗಳ ಹೆಸರನ್ನು ಬಹಿರಂಗಗೊಳಿಸಿದ್ದಾರೆ.
ಮಗಳಿಗೆ ‘ಇವಾರಾ’ ಎಂದು ನಾಮಕರಣ ಮಾಡಿದ್ದಾರೆ. ಮಗಳನ್ನು ರಾಹುಲ್ ಎತ್ತಿಕೊಂಡಿದ್ದು, ಪಕ್ಕದಲ್ಲೇ ಅತಿಯಾ ಅವರು ಇರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ನಮ್ಮ ಮಗಳು ‘ಇವಾರಾ’ ಅಂದರೆ ‘ದೇವರ ಉಡುಗೊರೆ’ ಎಂದು ರಾಹುಲ್ ಬರೆದುಕೊಂಡಿದ್ದಾರೆ.
2023ರ ಜ.23ರಂದು ಈ ಜೋಡಿ ವಿವಾಹವಾಗಿದ್ದರು. ಮಾರ್ಚ್ 14, 2024ರಂದು ಅತಿಯಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.