ಕಂಪ್ಲಿ- ಜವುಕು ಗ್ರಾಮದ ಕೃಷಿ ಹೊಂಡದಲ್ಲಿ ಮೊಸಳೆ ಪ್ರತ್ಯಕ್ಷ
Crocodile spotted in agricultural pond in Kampli-Javuku village
ಕಂಪ್ಲಿ: 24 ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜವುಕು ಗ್ರಾಮದ ರೈತ ವಿಶ್ವೇಶ್ವರರಾವು ಅವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಮೊಸಳೆಯೊಂದು ಕಂಡು ಬಂದಿದ್ದು, ಅದನ್ನು ರಕ್ಷಿಸಿ ತುಂಗಭದ್ರಾ ಜಲಾಶಯದಲ್ಲಿ ಬಿಡಲಾಯಿತು.
ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಮಾತನಾಡಿ ಕೃಷಿ ಹೊಂಡದಲ್ಲಿ ಮೊಸಳೆ ಇರುವುದು ಅಪರೂಪ.ಬಹುಶಃ ಮಳೆ ನೀರಿನೊಂದಿಗೆ ಬಂದು ಹೊಂಡದಲ್ಲಿ ಸೇರಿರುವ ಸಾಧ್ಯತೆಯಿದೆ. ಕಳೆದ ಮೂರಾ್ನಲ್ಕು ದಿನಗಳ ಹಿಂದೆಯೇ ಜವುಕಿನ ಕೃಷಿ ಹೊಂಡದಲ್ಲಿ ಮೊಸಳೆ ಇರುವುದು ಗಮನಕ್ಕೆ ಬಂದಿತ್ತು. ಮೊಸಳೆಯನ್ನು ಸಿರಗುಪ್ಪದ ವೇಸಗಾರ ಮಲ್ಲಯ್ಯ ರಕ್ಷಿಸಿದ್ದಾರೆ. ಮೊಸಳೆ ಮೂರಡಿ ಉದ್ದವಿದ್ದು, 50 ಕೆ.ಜಿ.ತೂಕವಾಗಿದೆ ಎಂದರು. ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ವೀರೇಶ್ ಮಾಶೆಟ್ಟಿ,ಗಸ್ತು ಅರಣ್ಯ ಪಾಲಕ ರವಿಚಂದ್ರ,ವೇಷಗಾರ ಮಲ್ಲಯ್ಯ ಹಾಗೂ ಇತರರು ಇದ್ದರು.
24-ಕಂಪ್ಲಿ-02: ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜವುಕು ಗ್ರಾಮದ ರೈತ ವಿಶ್ವೇಶ್ವರರಾವು ಅವರ ಕೃಷಿ ಹೊಂಡದಲ್ಲಿ ಪ್ರತ್ಯಕ್ಷವಾದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 