ಮಳೆ ಕೊರತೆಯಿಂದ ಬೆಳೆ ನಷ್ಟ: ಪರಿಹಾರಕ್ಕೆ ರೈತರ ಮನವಿ
Crop loss due to rainfall deficit: Farmers seek compensation
ಹೂವಿನಹಡಗಲಿ, ಆ. 08: ತಾಲ್ಲೂಕಿನ ಇಟ್ಟಿಗಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಬರ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಮೀರ್ ಅಹ್ಮದ್ ಖಾನ್ ಅವರು ರೈತರ ಅಹವಾಲುಗಳನ್ನು ಆಲಿಸಿದರು. ಮಳೆ ಕೊರತೆಯಿಂದಾಗಿ ಸೂರ್ಯಕಾಂತಿ, ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿದ್ದು, ಕೆಲವು ಬೆಳೆಗಳನ್ನು ಕೊಯ್ಲು ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಧಿಕಾರಿಗಳ ಗಮನಕ್ಕೆ ತಂದರು. ಮುಂಗಾರು ಮಳೆ ಕೊರತೆಯಿಂದ ಬಿತ್ತನೆ ಮಾಡಲಾಗದ ಕೃಷಿ ಜಮೀನುಗಳಿಗೂ ಬೆಳೆ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದರು.
ರೈತ ಮಹಿಳೆ ಶಾರದಮ್ಮ ಅವರ ಹೊಲಕ್ಕೆ ಭೇಟಿ ನೀಡಿದ ಕಾರ್ಯದರ್ಶಿ ಜಮೀರ್ ಅಹ್ಮದ್ ಖಾನ್ ಅವರು ಮಳೆ ಇಲ್ಲದೆ ತೆನೆ ಕಟ್ಟಲು ವಿಫಲವಾಗಿರುವ ಸೂರ್ಯಕಾಂತಿ ಬೆಳೆಗಳನ್ನು ಪರೀಶೀಲಿಸಿದರು. ಪ್ರತಿ ಎಕರೆಗೆ ಸುಮಾರು ?25 ಸಾವಿರ ವೆಚ್ಚ ಮಾಡಿದ್ದು, ಮಳೆ ಕೊರತೆಯಿಂದ ಬೆಳೆ ಸಂಪೂರ್ಣವಾಗಿ ವ್ಯರ್ಥವಾಗಿದೆ. ಸರ್ಕಾರ ತಕ್ಷಣ ನಷ್ಟ ಪರಿಹಾರ ನೀಡಬೇಕು ಎಂದು ಶಾರದಮ್ಮ ಮನವಿ ಮಾಡಿದರು. ಇದೇ ವೇಳೆ ರೈತ ರೇಣುಕಮ್ಮ ಅವರ ಎರಡು ಎಕರೆ ಈರುಳ್ಳಿ ಹೊಲಕ್ಕೂ ಕಾರ್ಯದರ್ಶಿ ಭೇಟಿ ನೀಡಿ ಪರೀಶೀಲಿಸಿದರು. ಬರಗಾಲದಿಂದ ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳಿಂದ ಇಳುವರಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ವಿವರಿಸಿದರು.
ರೈತರ ಅಹವಾಲು ಆಲಿಸಿದ ಕಾರ್ಯದರ್ಶಿ ಜಮೀರ್ ಅಹ್ಮದ್ ಖಾನ್ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಬೆಳೆ ನಷ್ಟದ ಕುರಿತು ಸೂಕ್ತವಾಗಿ ಪರೀಶೀಲಿಸಿ, ನಿಯಮಾನುಸಾರ ಪರಿಹಾರ ಒದಗಿಸುವ ಭರವಸೆ ನೀಡಿದರು. ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಸರ್ಕಾರ ಪ್ರತಿ ಎಕರೆಗೆ ಕನಿಷ್ಠ ?50 ಸಾವಿರ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಾಸಕ ಎಲ್. ಕೃಷ್ಣನಾಯ್ಕ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಿ.ಟಿ. ಮಂಜುನಾಥ್, ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್, ಸಹಾಯಕ ನಿರ್ದೇಶಕ ಜಿ.ಟಿ. ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 