ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಗೆ ಕೋಟಿ ನೆರವು: ಪಿ.ಟಿ. ಪರಮೇಶ್ವರ್
Crores in aid for the district from guarantee schemes: P.T. Parameshwar
ವಿಜಯನಗರ (ಹೊಸಪೇಟೆ), ಆಗಸ್ಟ್ 4: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಡಿ ಕಳೆದ ಮೂರು ವರ್ಷಗಳಲ್ಲಿ ಸರ್ಕಾರದ ಖಜಾನೆಯಿಂದ ನೇರವಾಗಿ ಸಾರ್ವಜನಿಕರ ಖಾತೆಗಳಿಗೆ ಒಟ್ಟು ?2,944 ಕೋಟಿ ಅನುದಾನವನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಪಾವತಿಸಲಾಗಿದೆ ಎಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನುಷ್ಠಾನಗೊಳಿಸಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಸೌಲಭ್ಯ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದರು. ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಲೋಪಗಳನ್ನು ಸರಿಪಡಿಸಿ, ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 