ನಾಡು-ನುಡಿ ಜಾಗೃತಿ ಬೆಳೆಸಿಕೊಳ್ಳಿ: ಶಂಕರ ಹಲಗತ್ತಿ
Cultivate awareness of the language: Shankar Halagatti
ಗದಗ 23: ವಿದ್ಯಾರ್ಥಿಗಳು ಕನ್ನಡನಾಡಿನ ಅಸ್ಮಿತೆಯನ್ನು ಅರ್ಥೈಸಿಕೊಳ್ಳಲು ನಾಡು-ನುಡಿಯ ಕುರಿತು ಗೌರವ ಹೊಂದಬೇಕೆಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ, ಸಾಂಸ್ಕೃತಿಕ ಘಟಕ ಮತ್ತು ಕನ್ನಡ ವಿಭಾಗ ಹಾಗೂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನ್ನಡ-ಕನ್ನಡಿಗ-ಕರ್ನಾಟಕ ನಾಡು-ನುಡಿ ಜಾಗೃತಿ ಮತ್ತು ಗೀತಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳು ನಾಡು-ನುಡಿಯ ಜಾಗೃತಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿ ಹುಲಕೋಟಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಅರ್ಜುನ ಗೊಳಸಂಗಿ, ಸಂಪನ್ಮೂಲ ವ್ಯಕ್ತಿ ಗದುಗಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಶಿವಪ್ಪ ಕುರಿ, ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಪ್ರೊ. ಸುಧಾ ಕೌಜಗೇರಿ ಅವರು ಕನ್ನಡ ಭಾಷೆ, ನಾಡಿನ ಹಿರಿಮೆ ಮತ್ತು ಕರ್ನಾಟಕ ಏಕೀಕರಣದಲ್ಲಿ ವಿದ್ಯಾವರ್ಧಕ ಸಂಘದ ಪಾತ್ರದ ಕುರಿತು ಮಾತನಾಡಿದರು. ಇಂಗ್ಲಿಷ ವಿಭಾಗದ ಪ್ರಾಧ್ಯಾಪಕಿ ಮಹಾನಂದಾ ಹಿರೇಮಠ ಅತಿಥಿಗಳನ್ನು ಸ್ವಾಗತಿಸಿದರು. ಸಾಂಸ್ಕೃತಿಕ ಘಟಕದ ಸಂಚಾಲಕ ರಮೇಶ ಹುಲಕುಂದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐಕ್ಯುಎಸಿ ಘಟಕದ ಸಹಸಂಚಾಲಕ ಡಾ. ಮಂಜುನಾಥ ತ್ಯಾಲಗಡಿ ವಂದನಾರೆ್ನಗೈದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಭೀಮೇಶ ನಿರೂಪಣೆ ಮಾಡಿದರು. ಕೊತಬಾಳದ ಶಂಕರಣ್ಣ ಸಂಕಣ್ಣವರ ಅವರ ಜಾನಪದ ತಂಡವು ನಾಡು-ನುಡಿಯ ಕುರಿತಾದ ಜಾನಪದ ಗೀತೆಗಳನ್ನು ಹಾಡಿ ಸಭೆಯನ್ನು ರೋಮಾಂಚನಗೊಳಿಸಿದರು.
ಕಾರ್ಯಕ್ರಮದಲ್ಲಿ ಕಲಾ ವಿಭಾಗದ ಮುಖ್ಯಸ್ಥ ಮತ್ತು ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಅಪ್ಪಣ್ಣ ಹಂಜೆ, ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಉಲ್ಲಾಸ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಲಕ್ಷ್ಮಣ ಮುಳಗುಂದ ಮತ್ತು ಎಲ್ಲ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 