ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ. ವಿ.ಐ. ಪಾಟೀಲ
Cultivate discipline and a spirit of service in life: Dr. V.I. Patil
ಬೈಲಹೊಂಗಲ 18 : ಕೆ.ಆರಿ್ಸ.ಇ.ಎಸ್. ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ 18 ಸ್ಕೌಟ್ಸ್ ಹಾಗೂ 21 ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಲಭಿಸಿದ್ದು, ಪ್ರಮಾಣಪತ್ರ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಹಾಗೂ ಕೆ.ಆರಿ್ಸ.ಇ.ಎಸ್. ಸಂಸ್ಥೆಯ ಅಧ್ಯಕ್ಷ ಡಾ. ವಿ.ಐ. ಪಾಟೀಲ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಸೇವಾ ಮನೋಭಾವ, ದೇಶಭಕ್ತಿ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ರಾಜ್ಯ ಪುರಸ್ಕಾರವು ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತುಬದ್ಧ ತರಬೇತಿ, ಸೇವಾ ಚಟುವಟಿಕೆಗಳು ಹಾಗೂ ವಿವಿಧ ಕೌಶಲ್ಯಗಳ ಸಾಧನೆಗೆ ದೊರೆತ ಗೌರವವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜ ಸೇವೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ತರಬೇತಿ ನೀಡಿದ ಶಿಕ್ಷಕರಾದ ಚನಬಸಪ್ಪ ಕರ್ಕಿ, ಮಂಜುನಾಥ ಸೂರ್ಯವಂಶಿ, ಮಲ್ಲಿಕಾರ್ಜುನ ಶಲ್ಲಿಕೇರಿ ಹಾಗೂ ಶ್ರೀದೇವಿ ಮಲ್ಲೂರ ಅವರಿಗೆ ಹಿಮಾಲಯ ಬ್ಯಾಚ್ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿಯೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 