ಜ್ಞಾನ ಮತ್ತು ಕೌಶಲ್ಯ ಬೆಳೆಸಿಕೊಳ್ಳಿ: ಸಂತೋಷ ಕಾಮಗೌಡ
Cultivate knowledge and skills: Santhosh Kamagowda
ಬೆಳಗಾವಿ, ಸೆ. 1: ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2026ಹಿ27 ಸಾಲಿನ ಸಾಂಸ್ಕೃತಿಕ, ಎನ್‌ಎಸ್‌ಎಸ್, ಎನ್ಸಿಸಿ, ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿಯೊಂದಿಗೆ ಜ್ಞಾನ, ಕೌಶಲ್ಯ, ಭಾಷಾ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಅಗತ್ಯ ಎಂದರು.
ಒಂದು ಕಾಲದಲ್ಲಿ ಕಾಲೇಜುಗಳಲ್ಲಿ ಶೇ.20ರಷ್ಟು ಮಾತ್ರ ಹೆಣ್ಣುಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಆದರೆ ಇಂದು ಶೇ.80ರಷ್ಟು ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಯಾಗಿದೆ ಎಂದು ಹೇಳಿದರು.
ತಂತ್ರಜ್ಞಾನವು ವೇಗವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡು ಹೊಸ ವಿಚಾರಗಳ ಬೆನ್ನತ್ತಬೇಕು. ಕೇವಲ ಅಂಕಗಳಿಗಿಂತ ಜ್ಞಾನ ಮತ್ತು ಕೌಶಲ್ಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ತಾವು ಕಲಿಯುವ ವಿಷಯದ ಆಳ ಮತ್ತು ವ್ಯಾಪ್ತಿಯನ್ನು ಅರಿಯಲು ಸ್ವಯಂ ಅಧ್ಯಯನ ಮಾಡಬೇಕು. ಅಧ್ಯಯನದ ವೇಳೆ ಉದ್ಭವಿಸುವ ಪ್ರಶ್ನೆಗಳಿಗೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಇದರಿಂದ ಕಲಿಕಾ ಸಾಮರ್ಥ್ಯ ಮತ್ತು ಬೌದ್ಧಿಕ ಬೆಳವಣಿಗೆ ಹೆಚ್ಚುತ್ತದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 