ಸಾಂಸ್ಕೃತಿಕ ರಾಯಭಾರಿ ಎಂ.ಪಿ.ಪ್ರಕಾಶ
Cultural Ambassador MP Prakash
ಲೋಕದರ್ಶನ ವರದಿ
ಹೂವಿನಹಡಗಲಿ 14: ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್ ರು ಸಾಂಸ್ಕೃತಿಕ ರಾಯಭಾರಿ, ಸೇಡಿನ ರಾಜಕಾರಣ ಮಾಡದ,ಸೋಗಿನ ವಿದ್ವತ್ತನ್ನು ಪ್ರದರ್ಶಿಸದ, ಅಪರೂಪದ ಸರಳ, ಸಜ್ಜನಿಕೆಯ ರಾಜಕಾರಣಿ ಯಾಗಿದ್ದರು ಎಂದು ವಿಶ್ರಾಂತ ಪ್ರಾಚಾರ್ಯರಾದ ಶಾಂತಮೂರ್ತಿ ಬಿ. ಕುಲಕರ್ಣಿ ಅಭಿಪ್ರಾಯ ಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಪಟ್ಟಣದ ಸರಕಾರಿ ಪಾಲಿಟೆಕ್ಟಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಎಂ..ಎಂ.ಪಾಟೀಲ್ ಸ್ಮಾರಕದತ್ತಿ, ಎಂ.ಪಿ. ಪ್ರಕಾಶ್ ಸ್ಮಾರಕ ದತ್ತಿ, ಸ್ಮರಣಾರ್ಥ ದತ್ತಿ ಮತ್ತು ಎ.ಎಂ.ಹೊಳಲಯ್ಯ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ’ಖಾದಿ ಗ್ರಾಮೋದ್ಯೋಗ’ ಹಾಗೂ ’ಎಂ.ಪಿ.ಪ್ರಕಾಶ್ ವ್ಯಕ್ತಿತ್ವ, ಸಾಧನೆ’ವಿಷಯ ಕುರಿತು ಉಪನ್ಯಾಸ ನೀಡಿದರು. ಎಂ.ಪಿ.ಪ್ರಕಾಶರ ಸೈದ್ಧಾಂತಿಕ, ಸಾಹಿತ್ಯಿಕ, ಸಾಂಸ್ಕೃತಿಕ, ರಾಜಕೀಯ,ಸಾಮಾಜಿಕ ಕೊಡುಗೆಗಳನ್ನು ವಿವರಿಸಿ ಅವರ ಬಹುಮುಖಿ ವ್ಯಕ್ತಿತ್ವವನ್ನು ಪರಿಚಯಿಸಿದರು.
ಹಲವಾರು ಖಾತೆಗಳ ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಕೃಷಿ ವಿಶ್ವವಿದ್ಯಾಲಯ, ಗ್ರಾಮೀಣ ಸಮುದಾಯ ಭವನಗಳ,ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆ, ಸಮಗ್ರ ವಚನ ಸಂಪುಟ ಪ್ರಕಟಣೆ, ನಿರ್ಮಲ ಕರ್ನಾಟಕ, ಹಂಪಿ ಉತ್ಸವದ ರೂವಾರಿ ಜತೆಗೆ ರಂಗಭಾರತಿ ಸಂಸ್ಥೆ ಮೂಲಕ ರಾಜ್ಯ ಮಟ್ಟದ, ಸ್ಥಳೀಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿದರು. ಪ್ರಾರಂಭದಲ್ಲಿ ಪ್ರಭಾರಿ ಪ್ರಾಚಾರ್ಯ ಪ್ರೊ.ಅಶೋಕ್ ಕಾರ್ಯಕ್ರಮ ಉದ್ಘಾಟಿಸಿ ಕಸಾಪ ದಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಅಭಿರುಚಿ ಮೂಡಿಸುತ್ತಿರುವುದು ಸ್ತುತ್ಯಾರ್ಹ ಎಂದರು. ಕಲಾವಿದರಾದ ಪ್ರಕಾಶ್ ಜೈನ್ ಜನಪದಗೀತೆ, ರಂಗಗೀತೆ, ಭಾವಗೀತೆಗಳನ್ನು ಹಾಡಿ ವಿದ್ಯಾರ್ಥಿಗಳ ಮನಸೂರೆ ಗೊಂಡರು. ಅಧ್ಯಕ್ಷತೆ ಕಸಾಪ ತಾಲೂಕು ಅಧ್ಯಕ್ಷ ಟಿ.ವೀರೇಂದ್ರ ಪಾಟೀಲ್ ವಹಿಸಿದ್ದರು. ಸಿದ್ದೇಶ್ವರಿ ಸಂಗಡಿಗರು ಪ್ರಾರ್ಥಿಸಿದರು. ಅಧೀಕ್ಷಕ ಸಂತೋಷ್ ಮಲ್ಕಿಒಡೆಯರ್ ಸ್ವಾಗತಿಸಿದರು. ಉಪನ್ಯಾಸಕ ಚಂದ್ರಕಾಂತ ವಂದಿಸಿದರು. ಪ್ರಥಮ ದರ್ಜೆ ಸಹಾಯಕ,ಕಲಾವಿದ ಬಿ.ಎಸ್.ಮಾಧವ ಕಾರ್ಯಕ್ರಮ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 